/newsfirstlive-kannada/media/post_attachments/wp-content/uploads/2023/08/hd-kumarsami.jpg)
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಎಸ್ಐಟಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಇದನ್ನೂ ಓದಿ:ರೈತರಿಗೆ ಸಿಹಿ ಸುದ್ದಿ.. KRS ಡ್ಯಾಮ್ ತುಂಬಲು ಇನ್ನೂ ಎಷ್ಟು ಅಡಿ ನೀರು ಬೇಕು..?
/newsfirstlive-kannada/media/post_attachments/wp-content/uploads/2024/09/Dharwad-High-court.jpg)
ಜನವರಿ ತಿಂಗಳಲ್ಲಿ ಸರ್ಕಾರ ಅಕ್ರಮ ಭೂ ಒತ್ತುವರಿಗೆ ಆರೋಪ ಪ್ರಕರಣ ತನಿಖೆ ಮಾಡಲು ಎಸ್ಐಟಿ ರಚಿಸಿತ್ತು. ಹೀಗಾಗಿ ಎಸ್ಐಟಿ ರಚನೆ ಪ್ರಶ್ನಿಸಿ ಹೆಚ್ ಡಿ ಕುಮಾರಸ್ವಾಮಿ ಅವರು ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್, ಎಸ್ಐಟಿ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆ ಮೂಲಕ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ಐಟಿ ರಚನೆ ಮಾಡಿಕೊಂಡಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us