Advertisment

ICC ಚಾಂಪಿಯನ್ಸ್ ಟ್ರೋಫಿ; ಟೀಮ್​ ಇಂಡಿಯಾಗೆ ಮಾಸ್ಟರ್​ ಸ್ಟ್ರೋಕ್​​ ಕೊಟ್ಟ ಬುಮ್ರಾ; ಏನಾಯ್ತು?

author-image
Ganesh Nachikethu
Updated On
ICC ಚಾಂಪಿಯನ್ಸ್ ಟ್ರೋಫಿ; ಟೀಮ್​ ಇಂಡಿಯಾಗೆ ಮಾಸ್ಟರ್​ ಸ್ಟ್ರೋಕ್​​ ಕೊಟ್ಟ ಬುಮ್ರಾ; ಏನಾಯ್ತು?
Advertisment
  • ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಆರಂಭ
  • ಟ್ರೋಫಿ ಆರಂಭಕ್ಕೆ ಇನ್ನೇನು ಒಂದೂವರೆ ತಿಂಗಳು ಮಾತ್ರ ಬಾಕಿ
  • ಈ ಮುನ್ನವೇ ಟೀಮ್​ ಇಂಡಿಯಾಗೆ ಬಿಗ್​ ಶಾಕ್​ ಕೊಟ್ಟ ಬುಮ್ರಾ

ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಆರಂಭಕ್ಕೆ ಇನ್ನೇನು ಕೇವಲ ಒಂದೂವರೆ ತಿಂಗಳು ಮಾತ್ರ ಬಾಕಿ ಇದೆ. ಮುಂದಿನ ತಿಂಗಳು ಫೆಬ್ರವರಿಯಲ್ಲಿ ಪಾಕಿಸ್ತಾನ ಚಾಂಪಿಯನ್ಸ್‌ ಟ್ರೋಫಿ ಆಯೋಜನೆ ಮಾಡಲಿದೆ. ಟೀಮ್​ ಇಂಡಿಯಾ ಕೂಡ ಈ ಟೂರ್ನಿಯಲ್ಲಿ ಭಾಗಿಯಾಗಲಿದೆ.

Advertisment

ಇನ್ನು, ಟೀಮ್​ ಇಂಡಿಯಾ ಪಂದ್ಯಗಳು ದುಬೈನಲ್ಲಿ ನಡೆಯಲಿವೆ. ಕಪ್‌ ಗೆಲ್ಲೋ ಫೇವರೇಟ್​​​ ಟೀಮ್​ಗಳ ಪೈಕಿ ಭಾರತ ತಂಡವು ಒಂದು. ಚಾಂಪಿಯನ್ಸ್​ ಟ್ರೋಫಿಗೆ ಮುನ್ನವೇ ಟೀಮ್​ ಇಂಡಿಯಾಗೆ ಶಾಕಿಂಗ್​ ನ್ಯೂಸ್​ ಒಂದಿದೆ. ಆಸ್ಟ್ರೇಲಿಯಾ ಪ್ರವಾಸದ ವೇಳೆ ಬೆನ್ನು ನೋವಿನ ಸಮಸ್ಯೆ ಎದುರಿಸುತ್ತಿದ್ದ ಜಸ್ಪ್ರಿತ್ ಬುಮ್ರಾ ಗಾಯದ ಬಗ್ಗೆ ಬಿಗ್ ಅಪ್‌ಡೇಟ್‌ ಸಿಕ್ಕಿದೆ.

ಬುಮ್ರಾಗೆ ಗಂಭೀರ ಗಾಯ

ಇತ್ತೀಚಿಗೆ ಬಾರ್ಡರ್‌ ಗವಾಸ್ಕರ್‌ ಸರಣಿಯ 5ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುವ ವೇಳೆ ಜಸ್ಪ್ರಿತ್ ಬುಮ್ರಾ ಮೈದಾನದಿಂದ ಹೊರ ನಡೆದರು. ಮೈದಾನದಿಂದ ಹೊರ ಹೋಗುತ್ತಿದ್ದಂತೆ ಬುಮ್ರಾ ಬೌಲಿಂಗ್ ಕೋಚ್ ಹಾಗೂ ಸಿಬ್ಬಂದಿ ಜತೆಗೆ ಆಸ್ಪತ್ರೆಗೆ ತೆರಳುತ್ತಿದ್ದರು. ಈಗ ಇವರ ಗಾಯದ ಬಗ್ಗೆ ಬಿಗ್‌ ಅಪ್‌ಡೇಟ್‌ ಸಿಕ್ಕಿದ್ದು, ಇವರು 3 ತಿಂಗಳು ರೆಸ್ಟ್​ ಮಾಡಬೇಕಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು, ಬುಮ್ರಾ ಬೆನ್ನು ನೋವಿಗೆ ಆಸ್ಟ್ರೇಲಿಯಾದಲ್ಲಿ ಚಿಕಿತ್ಸೆ ಪಡೆಯಬಹುದು. ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19ನೇ ತಾರೀಕಿನಿಂದ ಶುರುವಾಗಲಿದೆ. ಇವರು 3 ತಿಂಗಳು ರೆಸ್ಟ್​ ಮಾಡಬೇಕಾದ ಕಾರಣ ಟೂರ್ನಿ ಆಡುವುದು ಡೌಟ್​.

Advertisment

ಜಸ್ಪ್ರಿತ್ ಬುಮ್ರಾ ಬಾರ್ಡರ್‌ ಗವಾಸ್ಕರ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ರು. ಇವರು ಈ ಸರಣಿಯಲ್ಲೇ ಅತೀ ಹೆಚ್ಚು ವಿಕೆಟ್‌ ಪಡೆದ ಬೌಲರ್‌. ಬುಮ್ರಾ ತಾನು ಆಡಿದ 5 ಪಂದ್ಯಗಳಲ್ಲಿ 32 ವಿಕೆಟ್‌ ಕಬಳಿಸುವ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದಾರೆ.

ಇದನ್ನೂ ಓದಿ:ICC ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ತಂಡ: ಟೀಮ್ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment