ದರ್ಶನ್ ಅರೆಸ್ಟ್‌ ಕೇಸ್​ಗೆ ಹೊಸ ಟ್ವಿಸ್ಟ್ ಕೊಟ್ಟ ಪೊಲೀಸರು.. ರಿಮ್ಯಾಂಡ್ ಅರ್ಜಿಯಲ್ಲಿ ಸ್ಫೋಟಕ ಅಂಶ; ಏನದು?

author-image
admin
Updated On
ದರ್ಶನ್ ಇಂದು ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ.. ಅದಕ್ಕೆ ಪೊಲೀಸರು ಏನ್ ಮಾಡಿದ್ದಾರೆ ಗೊತ್ತಾ?
Advertisment
  • ಪರಪ್ಪನ ಅಗ್ರಹಾರ ಜೈಲಿನಿಂದ ಕೋರ್ಟ್‌ಗೆ ಹಾಜರಾದ ದರ್ಶನ್
  • ಸರ್ಕಾರದ ಪರ ವಕೀಲರಿಂದ ಜೆಸಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ
  • ದರ್ಶನ್ ಗ್ಯಾಂಗ್ ವಿರುದ್ಧ ಗಂಭೀರ ಆರೋಪ ಮಾಡಿದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನದಲ್ಲಿರುವ ದರ್ಶನ್‌ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಇಂದು ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಆರೋಪಿಗಳನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ದರ್ಶನ್ ಸೇರಿ ಎಲ್ಲಾ ಆರೋಪಿಗಳ ಇಂದು ಕೋರ್ಟ್ ಮುಂದೆ ಹಾಜರಾಗಿದ್ದರು.

ಇದನ್ನೂ ಓದಿ: ರೇಣುಕಾಸ್ವಾಮಿ ಮನೆಯಲ್ಲೇ ದರ್ಶನ್ ಪರ ಮಾತು.. ನಟ ಗಣೇಶ್ ರಾವ್ ಚಿತ್ರದುರ್ಗಕ್ಕೆ ಭೇಟಿ ಕೊಟ್ಟಾಗ ಆಗಿದ್ದೇನು..? 

ಆರೋಪಿಗಳ ವಿಚಾರಣೆ ನಡೆಸಿದ 24 ನೇ ಎಸಿಎಂಎಂ ಇನ್ಚಾರ್ಜ್ ಎಕಾನಾಮಿಕ್ ಅಫೆನ್ಸ್ ಕೋರ್ಟ್ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಆರೋಪಿಗಳ ಹಾಜರು ಖಚಿತಪಡಿಸಿಕೊಂಡರು. ಸರ್ಕಾರದ ಪರ ವಕೀಲರು ಕೋರ್ಟ್‌ ಜೆಸಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಮಾಡಿದ್ದು, ದರ್ಶನ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 14ರವರೆಗೂ ಮುಂದುವರಿಸಲಾಗಿದೆ. ಜೆಸಿ ರಿಮ್ಯಾಂಡ್ ಅರ್ಜಿಯನ್ನು ಆರೋಪಿಗಳ ಪರ ವಕೀಲರಿಗೆ ನೀಡಲು ಕೋರ್ಟ್‌ ಸೂಚನೆ ನೀಡಿದೆ.

publive-image

ರಿಮ್ಯಾಂಡ್ ಅರ್ಜಿಯಲ್ಲಿ ಹೇಳಿದ್ದೇನು?
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ದರ್ಶನ್ ಗ್ಯಾಂಗ್ ವಿರುದ್ಧ ಮತ್ತೊಂದು ಜೆಸಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ ಆರೋಪಿಗಳ ಪರ ಕೆಲವು ವ್ಯಕ್ತಿಗಳು ಮೃತನ ಕುಟುಂಬದವರನ್ನು ಭೇಟಿ ಮಾಡಿದ್ದಾರೆ. ಇದು ತನಿಖೆಯಲ್ಲಿ ತಿಳಿದು ಬಂದಿರುತ್ತದೆ.

ಇದನ್ನೂ ಓದಿ: EXCLUSIVE: ರೇಣುಕಾಸ್ವಾಮಿ ಕುಟುಂಬ ಕ್ಷಮಿಸಿದ್ರೆ ದರ್ಶನ್ ಸೇಫ್ ಆಗ್ತಾರಾ? ಕಾಂಪ್ರಮೈಸ್ ಸಾಧ್ಯನಾ?

ಕೊಲೆ ಪ್ರಕರಣದ ಆರೋಪಿಗಳು ಪ್ರಭಾವಿಗಳು. ಹಣಬಲ ಮತ್ತು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆರೋಪಿ ಪರ ಕೆಲವರು ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಬೆದರಿಕೆ, ಹಣದ ಆಮಿಷ ನೀಡುವ ಸಾಧ್ಯತೆ ಇದೆ. ಅಲ್ಲದೇ ತಮ್ಮ ಅಭಿಮಾನಿ ಬಳಗದ ಮೂಲಕ ಸಾಕ್ಷಿದಾರರಿಗೆ ಸಾಕ್ಷಿ ನುಡಿಯದಂತೆ ಬೆದರಿಕೆ ಹಾಕುವ, ಮೃತನ ಕುಟುಂಬದವರಿಗೆ ಹೆದರಿಸುವ ಮತ್ತು ಆಮಿಷ ತೋರಿಸಿ ಸಾಕ್ಷಿ ಹೇಳದಂತೆ ಮಾಡುವ ಸಂಭವವೂ ಇದೆ. ಹೀಗಾಗಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ಸಾಕ್ಷಿ‌ನಾಶ ಮಾಡುವ ಸಾಧ್ಯತೆಯೂ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment