2ನೇ ಮಹತ್ವದ ಟೆಸ್ಟ್​​; ಟೀಮ್​ ಇಂಡಿಯಾದ ಸ್ಟಾರ್​​​ ಪ್ಲೇಯರ್​​ ಬುಮ್ರಾಗೆ ಬಿಗ್​ ಶಾಕ್​​

author-image
Ganesh Nachikethu
Updated On
ಟೀಮ್​​ ಇಂಡಿಯಾಗೆ ಬಿಗ್​​ ಶಾಕ್​​; 3ನೇ ಟೆಸ್ಟ್​​ನಿಂದ ಸ್ಟಾರ್​ ವೇಗಿ ಬುಮ್ರಾ ಔಟ್​​​
Advertisment
  • ಭಾರತ, ಆಸ್ಟೇಲಿಯಾ ಮಧ್ಯೆ 2ನೇ ಟೆಸ್ಟ್​ ಪಂದ್ಯ
  • 2ನೇ ಟೆಸ್ಟ್​​ಗೆ ಮುನ್ನ ಟೀಮ್​ ಇಂಡಿಯಾಗೆ ಶಾಕ್
  • ಕ್ಯಾಪ್ಟನ್ಸಿಯಿಂದ ಸ್ಟಾರ್​ ಆಟಗಾರನಿಗೆ ಕೊಕ್​​..!

ಇತ್ತೀಚೆಗೆ ಪರ್ತ್​​​ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ಆಸ್ಟೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಡಿಸೆಂಬರ್​​ 6ನೇ ತಾರೀಕಿನಿಂದ ಟೀಮ್​ ಇಂಡಿಯಾ, ಆಸ್ಟ್ರೇಲಿಯಾ ಮಧ್ಯೆ 2ನೇ ಟೆಸ್ಟ್​​ ಪಂದ್ಯ ನಡೆಯಲಿದೆ. ಈ ಮಧ್ಯೆ ಟೀಮ್​ ಇಂಡಿಯಾ ಸ್ಟಾರ್​​ಗೆ ಬಿಗ್​ ಶಾಕಿಂಗ್​ ನ್ಯೂಸ್​ ಒಂದಿದೆ.

2ನೇ ಪಂದ್ಯಕ್ಕೆ ರೋಹಿತ್ ಶರ್ಮಾ ಕ್ಯಾಪ್ಟನ್​​

ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯಕ್ಕೆ ಟೀಮ್​ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲಿ ಭಾರೀ ಬದಲಾವಣೆ ಆಗಿತ್ತು. ಇದಕ್ಕೆ ಕಾರಣ ಕ್ಯಾಪ್ಟನ್​ ರೋಹಿತ್​ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿದಿದ್ದು. ರೋಹಿತ್​​ ಮತ್ತು ರಿತಿಕಾ ಜೋಡಿ 2ನೇ ಮಗುವಿಗೆ ಜನ್ಮ ನೀಡಿದ ಕಾರಣ ಇವರು ಮೊದಲ ಟೆಸ್ಟ್​ಗೆ ಲಭ್ಯರಾಗಿಲ್ಲ. ಈಗ 2ನೇ ಟೆಸ್ಟ್​ ಪಂದ್ಯಕ್ಕೆ ಮುನ್ನ ರೋಹಿತ್​ ಶರ್ಮಾ ಟೀಮ್​ ಇಂಡಿಯಾ ಸೇರಿಕೊಂಡಿದ್ದಾರೆ. ಹೀಗಾಗಿ ಇವರೇ ಟೀಮ್​ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

ಬುಮ್ರಾಗೆ ಕ್ಯಾಪ್ಟನ್ಸಿಯಿಂದ ಕೊಕ್​

ರೋಹಿತ್​​ ಅಲಭ್ಯತೆಯಲ್ಲಿ ಟೀಮ್​ ಇಂಡಿಯಾವನ್ನು ಬುಮ್ರಾ ​​ಮುನ್ನಡೆಸುತ್ತಿದ್ದರು. ಇವರ ನಾಯಕತ್ವದಲ್ಲಿ ಟೀಮ್​ ಇಂಡಿಯಾ ಐತಿಹಾಸಿಕ ಜಯ ದಾಖಲಿಸಿತ್ತು. ಸದ್ಯ ಜಸ್​ಪ್ರಿತ್​ ಬುಮ್ರಾ ಭಾರತ ಟೆಸ್ಟ್​ ತಂಡದ ಉಪನಾಯಕ. ರೋಹಿತ್​​ ಇಲ್ಲದಿದ್ದಾಗ ಇವರೇ ತಂಡವನ್ನು ಲೀಡ್​ ಮಾಡಲಿದ್ದಾರೆ ಎಂದು ಟೀಮ್​ ಇಂಡಿಯಾ ಮ್ಯಾನೇಜ್ಮೆಂಟ್​ ಘೋಷಿಸಿತ್ತು. 2ನೇ ಟೆಸ್ಟ್​ ಪಂದ್ಯಕ್ಕೆ ರೋಹಿತ್​ ಬಂದಿರೋ ಕಾರಣ ಬುಮ್ರಾ ಅವರಿಗೆ ಕ್ಯಾಪ್ಟನ್ಸಿಯಿಂದ ಕೊಕ್​ ನೀಡಲಾಗಿದೆ.

ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ಭಾರತ ಟ್ರೋಪಿ ಗೆದ್ದಿತ್ತು. 2016 ರಿಂದಲೂ ಟೀಮ್​ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿ ಗೆಲ್ಲುತ್ತಲೇ ಬಂದಿದೆ. ಟೀಮ್​ ಇಂಡಿಯಾ ಈಗಿರೋ ಪರಿಸ್ಥಿತಿ ನೋಡಿದ್ರೆ ಗೆಲ್ಲೋದು ಕಷ್ಟವಾಗಿದೆ. ಎಷ್ಟೇ ಕಷ್ಟ ಆದ್ರೂ ಪರ್ವಾಗಿಲ್ಲ ಆಸೀಸ್ ಸರಣಿ ಗೆಲ್ಲಲೇಬೇಕು ಎಂದು ಟೀಮ್​ ಇಂಡಿಯಾ ಸಜ್ಜಾಗಿದೆ. ಟೀಮ್​ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 5 ಟೆಸ್ಟ್​​ ಪಂದ್ಯಗಳ ಸರಣಿ ಗೆದ್ರೆ ಮಾತ್ರ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲಿದೆ.

ಇದನ್ನೂ ಓದಿ:ವಿರಾಟ್ ಕೊಹ್ಲಿ ಫಾರ್ಮ್​ಗೆ ಮರಳಿದ್ದಕ್ಕೆ ಮಾಜಿ ಪ್ಲೇಯರ್ಸ್​ ಆತಂಕ.. ತಂಡದ ವಿರುದ್ಧ ಬೇಸರ!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment