/newsfirstlive-kannada/media/post_attachments/wp-content/uploads/2024/11/INDVSNZ-2.jpg)
ಇತ್ತೀಚೆಗೆ ಮೆಲ್ಬೋರ್ನ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 4ನೇ ಮಹತ್ವದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಆಸೀಸ್ ಪ್ರವಾಸದಲ್ಲಿ 3ನೇ ಬಾರಿ ಬಾರ್ಡರ್ ಗವಾಸ್ಕರ್ ಟ್ರೋಫಿ ಎತ್ತುವ ಟೀಮ್ ಇಂಡಿಯಾಗೆ ಭಾರೀ ಹಿನ್ನಡೆ ಆಗಿದೆ.
4ನೇ ಟೆಸ್ಟ್ ಪಂದ್ಯ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶ ಮಾಡುವ ಟೀಮ್ ಇಂಡಿಯಾ ಕನಸಿಗೆ ಆಸ್ಟ್ರೇಲಿಯಾ ತಂಡ ಪೆಟ್ಟು ನೀಡಿದೆ. ಮೆಲ್ಬೋರ್ನ್ ಟೆಸ್ಟ್ ಸೋಲುತ್ತಿದ್ದಂತೆ ಟೀಮ್ ಇಂಡಿಯಾ ಪಾಯಿಂಟ್ಸ್ ಟೇಬಲ್ನಲ್ಲಿ ಕುಸಿತ ಕಂಡಿದೆ.
184 ರನ್ಗಳಿಂದ ಸೋಲು
ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 184 ರನ್ಗಳಿಂದ ಸೋಲು ಕಂಡಿದೆ. ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಬ್ಯಾಟರ್ಗಳು ರನ್ ಕಲೆ ಹಾಕಲು ಪರದಾಡಿದ್ರು. ಬಹಳ ರಕ್ಷಣಾತ್ಮಕ ಆಟ ಆಡುತ್ತಿದ್ದ ರೋಹಿತ್ ತಾಳ್ಮೆ ಕಳೆದುಕೊಂಡು ವಿಕೆಟ್ ಒಪ್ಪಿಸಿದ್ರು. ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ ಕೂಡ ಭಾರತ ತಂಡಕ್ಕೆ ಕೈ ಕೊಟ್ಟರು. ಇದರ ಪರಿಣಾಮ ಡ್ರಾ ಸಾಧಿಸಬೇಕಿದ್ದ ಪಂದ್ಯವನ್ನೇ ಕೈ ಚೆಲ್ಲಿದೆ.
ಸೌತ್ ಆಫ್ರಿಕಾ ಪ್ರವೇಶ
ಇತಿಹಾಸದಲ್ಲೇ ಮೊದಲ ಬಾರಿಗೆ ವಿಶ್ವಟೆಸ್ಟ್ ಚಾಂಪಿಯನ್ಶಿಪ್ ಫೈನಲ್‌ಗೆ ಸೌತ್ ಆಫ್ರಿಕಾ ಪ್ರವೇಶ ಪಡೆದಿದೆ. ಪಾಕಿಸ್ತಾನ ವಿರುದ್ಧ ಗೆದ್ದ ಆಫ್ರಿಕಾ ಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ದಕ್ಷಿಣ ಆಫ್ರಿಕಾ ಡಬ್ಲ್ಯುಟಿಸಿ ಅಂಕ ಪಟ್ಟಿಯಲ್ಲಿ 11 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿ ಶೇಕಡಾ 66.67ರೊಂದಿಗೆ ಮೊದಲ ಸ್ಥಾನದಲ್ಲಿದೆ.
ಸರಣಿ ಆರಂಭಕ್ಕೂ ಮುನ್ನ ಭಾರತ 2ನೇ ಸ್ಥಾನದಲ್ಲಿತ್ತು. 2ನೇ ಸೋಲು ಕಾಣುತ್ತಿದ್ದಂತೆ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ. ಆಸ್ಟ್ರೇಲಿಯಾ 16 ಪಂದ್ಯಗಳಲ್ಲಿ 10 ಜಯ ಸಾಧಿಸಿ ಶೇಕಡಾ 61.46ರೊಂದಿಗೆ 2ನೇ ಸ್ಥಾನದಲ್ಲಿದೆ.
ಇದನ್ನೂ ಓದಿ:RCB ಕೋಟಿ ಕೋಟಿ ಹಣ ಕೊಟ್ಟರೂ ಪ್ರಯೋಜನ ಇಲ್ಲ! ಈ ಮೂವರು ಸ್ಟಾರ್ಗೆ ಬೆಂಚ್ ಪಕ್ಕಾ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ