/newsfirstlive-kannada/media/post_attachments/wp-content/uploads/2023/12/ALLU-ARJUN.jpg)
ಹೈದರಾಬಾದ್: ನನ್ನ ಮಗ ಅಲ್ಲು ಅರ್ಜುನ್ ಫ್ಯಾನ್. ಪುಷ್ಪ-2 ಸಿನಿಮಾ ನೋಡಬೇಕು ಎಂದಿದ್ದಕ್ಕೆ ನನ್ನ ಮಗನನ್ನು ಸಂಧ್ಯಾ ಥಿಯೇಟರ್ಗೆ ಕರೆದುಕೊಂಡು ಹೋಗಿದ್ದೆ. ಆಗ ಈ ಘಟನೆ ನಡೆದಿದೆ. ಅಲ್ಲು ಅರ್ಜುನ್ ಅವರಿಗೂ ಈ ಕೇಸ್ಗೂ ಸಂಬಂಧವೇ ಇಲ್ಲ. ನಾನು ಬೇಕಾದ್ರೆ ಕೇಸ್ ವಾಪಸ್ ಪಡೆಯುತ್ತೇನೆ. ಪೊಲೀಸ್ರು ನಮಗೆ ಏನು ತಿಳಿಸದೆ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ಮೃತ ಮಹಿಳೆ ರೇವತಿ ಪತಿ ಭಾಸ್ಕರ್ ಅವರು ಹೇಳಿದ್ದಾರೆ.
ನನಗೆ ಈ ವಿಷಯವೇ ಗೊತ್ತಿಲ್ಲ. ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದು ನನ್ನ ಗಮನಕ್ಕೆ ಬಂದಿಲ್ಲ. ನಾನು ಮೊಬೈಲ್ನಲ್ಲಿ ವಿಡಿಯೋ ನೋಡಿದ್ದೇನೆ. ಅಲ್ಲು ಅರ್ಜುನ್ ಅವರಿಗೂ ಕೇಸ್ಗೂ ಯಾವುದೇ ಸಂಬಂಧ ಇಲ್ಲ ಎಂದು ಪುನರುಚ್ಚರಿಸಿದರು.
ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಕೇಸ್ನಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಮಾಡಿದ ನಂತರ ಪೊಲೀಸ್ರು ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ನಾಂಪಲ್ಲಿ ಕೋರ್ಟ್ನಲ್ಲಿ ಹಾಜರುಪಡಿಸಿದ್ರು. ಕೋರ್ಟ್ ಈಗ ಮಹತ್ವದ ಆದೇಶ ಹೊರಡಿಸಿದ್ದು, 14 ದಿನಗಳ ಕಾಲ ಅಲ್ಲು ಅರ್ಜುನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಅಲ್ಲು ಅರ್ಜು ಅರೆಸ್ಟ್
ಇಂದು ಬೆಳಿಗ್ಗೆ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್ ಮನೆಗೆ ಹೋಗಿ ಅರೆಸ್ಟ್ ಮಾಡಿದ್ದಾರೆ. ಕಾಫಿ ಕುಡಿಯುತ್ತಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸ್ರು ಬಂಧಿಸಿದ್ದಾರೆ. ಮೃತ ಮಹಿಳೆ ರೇವತಿ ಪತಿ ನೀಡಿದ ದೂರಿನ ಆಧಾರದ ಮೇರೆಗೆ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ಈಗಾಗಲೇ ಕೇಸ್ ಸಂಬಂಧ ಸಂಧ್ಯಾ ಥಿಯೇಟರ್ ಮಾಲೀಕ, ಮ್ಯಾನೇಜರ್ ಹಾಗೂ ಅಲ್ಲು ಅರ್ಜುನ್ ಜೊತೆಗೆ ಇದ್ದ ಬೌನ್ಸರ್ಗಳನ್ನು ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (1) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ.
ಇದನ್ನೂ ಓದಿ:ಮಹಿಳೆ ಜೀವ ತೆಗೆದ ಕೇಸ್; ನಟ ಅಲ್ಲು ಅರ್ಜುನ್ಗೆ 14 ದಿನ ನ್ಯಾಯಾಂಗ ಬಂಧನ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ