newsfirstkannada.com

ಹಾಸನ ಪೆನ್‌ಡ್ರೈವ್ ಕೇಸ್‌ಗೆ ಬಿಗ್ ಟ್ವಿಸ್ಟ್; ಅಶ್ಲೀಲ ವಿಡಿಯೋ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಡ್ರೈವರ್‌ ಕಾರ್ತಿಕ್

Share :

Published April 30, 2024 at 11:29am

    15 ವರ್ಷದಿಂದ ಪ್ರಜ್ವಲ್‌ ರೇವಣ್ಣ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿದ್ದೆ

    ವಿಡಿಯೋ ರಿಲೀಸ್ ಮಾಡಬಾರದು ಎಂದು ಪ್ರಜ್ವಲ್‌ ರೇವಣ್ಣ ಸ್ಟೇ ತಂದರು

    ಬಿಜೆಪಿ ನಾಯಕನಿಗೆ ಬಿಟ್ಟರೆ ಬೇರೆ ಯಾರಿಗೂ ನಾನು ಪೆನ್‌ಡ್ರೈವ್ ಕೊಟ್ಟಿಲ್ಲ

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾರು ಚಾಲಕನಾಗಿದ್ದ ಕಾರ್ತಿಕ್‌ ಅವರು ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ಬಿಜೆಪಿ ನಾಯಕನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣ ದಾಖಲಾದ ಮೇಲೆ ಕಾರ್ತಿಕ್ ಅವರು ವಿಡಿಯೋದಲ್ಲಿ ತನ್ನ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಡ್ರೈವರ್ ಕಾರ್ತಿಕ್ ಅವರು ನಾನು 15 ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಕಳೆದ ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ದರು. ಹಿಂಸೆ ಕೊಟ್ಟು ಹಲ್ಲೆ ಮಾಡಿದ್ದರಿಂದ ಅವರ ಮನೆಯಿಂದ ಹೊರಬಂದೆ ಎಂದಿದ್ದಾರೆ.

ಹಾಸನ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಹೆಚ್‌.ಡಿ ರೇವಣ್ಣ ಅವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದರು. ಆಗ ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್, ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡರು ಕೇಳಿದರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ ಎಂದು ಡ್ರೈವರ್ ಕಾರ್ತಿಕ್ ಹೇಳಿದ್ದಾರೆ.

ಇದನ್ನೂ ಓದಿ: ‘2,976 ನೀಲಿ ಚಿತ್ರಗಳಲ್ಲಿ ಭಾಗಿ’- ಪ್ರಜ್ವಲ್ ರೇವಣ್ಣ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದ ಬಿಜೆಪಿ ಮುಖಂಡ 

ಮುಂದುವರಿದು ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಅಶ್ಲೀಲ ವಿಡಿಯೋ ಕಾಪಿಯನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋದು ಗೊತ್ತಿಲ್ಲ. ಹೊಳೆನರಸೀಪುರದ ಬಿಜೆಪಿ ಅಭ್ಯರ್ಥಿಯಾಗಿದ್ದ ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ಪೆನ್‌ಡ್ರೈವ್ ಕೊಟ್ಟಿಲ್ಲ. ಪೆನ್‌ಡ್ರೈವ್ ಯಾರು ಹಂಚಿದರೂ ನನಗೆ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ. ಅಶ್ಲೀಲ ವಿಡಿಯೋ ಬಿಡುಗಡೆಗೆ ಸ್ಟೇ ತಂದ ಬಗ್ಗೆ ಮೊದಲು ದೇವರಾಜೇಗೌಡರ ಜೊತೆ ಮಾತಾಡಿದ್ದೆ. ಆಗ ನನ್ನ ಬಳಿ ಇರೋ ಫೋಟೋ, ವಿಡಿಯೋ ಕೊಡು ಎಂದಿದ್ದರು. ದೇವರಾಜೇಗೌಡ ಅದನ್ನ ಏನಕ್ಕೆ ಬಳಕೆ ಮಾಡಿಕೊಂಡ್ರೋ ಗೊತ್ತಿಲ್ಲ ಎಂದು ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ವಿವರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನ ಪೆನ್‌ಡ್ರೈವ್ ಕೇಸ್‌ಗೆ ಬಿಗ್ ಟ್ವಿಸ್ಟ್; ಅಶ್ಲೀಲ ವಿಡಿಯೋ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಡ್ರೈವರ್‌ ಕಾರ್ತಿಕ್

https://newsfirstlive.com/wp-content/uploads/2024/04/Prajwal-Revanna-Hassan.jpg

Load More