ಕಾಲ್ತುಳಿತ ಕೇಸ್​ಗೆ ಬಿಗ್ ಟ್ವಿಸ್ಟ್.. ಮೂವರನ್ನು ವಶಕ್ಕೆ ಪಡೆದ ಪೊಲೀಸರು..!

author-image
Veena Gangani
Updated On
ಕಾಲ್ತುಳಿತ ಕೇಸ್​ಗೆ ಬಿಗ್ ಟ್ವಿಸ್ಟ್.. ಮೂವರನ್ನು ವಶಕ್ಕೆ ಪಡೆದ ಪೊಲೀಸರು..!
Advertisment
  • ಆರ್​ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ಪೊಲೀಸರ ವಶಕ್ಕೆ
  • ಡಿಎನ್​ಎ ಸಂಸ್ಥೆಯ ಇಬ್ಬರನ್ನ ವಶಕ್ಕೆ ಪಡೆದ ಪೊಲಿಸರು
  • ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಬಂಧನ ಬಗ್ಗೆ ಮಾಹಿತಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಕೇಸ್​ಗೆ ಬಿಗ್​ ಟ್ವಿಸ್ಟ್​ವೊಂದು ಸಿಕ್ಕಿದೆ. ಈ ಕೇಸ್​ಗೆ ಸಂಬಂಧಿಸಿದಂತೆ ಆರ್​ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:ಬಿ.ದಯಾನಂದ್ ತಲೆದಂಡ ಬೆನ್ನಲ್ಲೇ ಹೊಸ ಆಯುಕ್ತರ ನೇಮಕ.. ನೂತನ ಪೊಲೀಸ್ ಕಮಿಷನರ್ ಇವರೇ..!

[caption id="attachment_126681" align="alignnone" width="800"]publive-image ಆರ್​ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ನಿಖಿಲ್[/caption]

ಅಲ್ಲದೇ ಡಿಎನ್​ಎ ಸಂಸ್ಥೆಯ ಇಬ್ಬರನ್ನ ಪೊಲಿಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಬಂಧನ ಬಗ್ಗೆ ಅಧಿಕೃತ ಮಾಹಿತಿ ತಿಳಿಯಲಿದೆ. ಆರ್.ಸಿ.ಬಿ ತಂಡದ ಮಾರ್ಕೆಟಿಂಗ್ ಹೆಡ್ ಆಗಿರೋ ನಿಖಿಲ್ ಸೋಸಲೆ, ಡಿಎನ್​ಎ ಸಂಸ್ಥೆಯ ಕಿರಣ್ ಮತ್ತು ಸುಮಂತ್ ಎಂಬುವವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

publive-image

ಆರ್​ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಚಿನ್ನಸ್ವಾಮಿಯಲ್ಲಿ ಬುಧುವಾರ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಕಮಿಷನರ್ ಸೇರಿ 5 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಅಂತ ಆದೇಶ ಹೊರಡಿಸಿದ್ದರು. ಈ ಬೆನ್ನಲ್ಲೇ ಆರ್​ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment