/newsfirstlive-kannada/media/post_attachments/wp-content/uploads/2024/07/Kohli_Bumrah.jpg)
ನಾಳೆ ಟೀಮ್ ಇಂಡಿಯಾ, ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಮುಗಿಯಲಿದೆ. ಇದಾದ ಬೆನ್ನಲ್ಲೇ ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಶುರುವಾಗಲಿದೆ. ಈ ಮೆಗಾ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೇರಿ ಒಟ್ಟು 8 ತಂಡಗಳು ಭಾಗವಹಿಸಲಿವೆ.
ಹೇಗಾದ್ರೂ ಮಾಡಿ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆಲ್ಲಬೇಕು ಎಂದು ಟೀಮ್ ಇಂಡಿಯಾ ಮುಂದಾಗಿದೆ. ಮುಂದಿನ ವಾರ ಎಂದರೆ ಫೆಬ್ರವರಿ 20ನೇ ತಾರೀಕಿನಂದು ಟೀಮ್ ಇಂಡಿಯಾ ತನ್ನ ಮೊದಲ ಚಾಂಪಿಯನ್ಸ್ ಟ್ರೋಫಿ ಪಂದ್ಯ ಆಡಲಿದೆ. ಇದರ ಮಧ್ಯೆ ಟೀಮ್ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ.
ಭಾರೀ ಕುತೂಹಲ ಹೆಚ್ಚಿಸಿದ ಬುಮ್ರಾ
ಟೀಮ್ ಇಂಡಿಯಾದ ಯರ್ಕರ್ ಸ್ಪೆಷಲಿಸ್ಟ್ ಜಸ್ಪ್ರಿತ್ ಬುಮ್ರಾ. ಇವರು ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ರು. ಟೀಮ್ ಇಂಡಿಯಾ ಅತೀ ಹೆಚ್ಚು ವಿಕೆಟ್ ಪಡೆದರು. ಆದರೆ, ಸಿಡ್ನಿ ಟೆಸ್ಟ್ ಪಂದ್ಯ ಆಡುವಾಗ ಬೆನ್ನಿನ ಸಮಸ್ಯೆ ಕಾಣಿಸಿಕೊಂಡಿತ್ತು. ಅಂದಿನಿಂದ ಈವರೆಗೂ ಬುಮ್ರಾ ಟೀಮ್ ಇಂಡಿಯಾ ಪರ ಮೈದಾನದಲ್ಲಿ ಕಾಣಿಸಿಕೊಂಡಿಲ್ಲ.
ಸದ್ಯದಲ್ಲೇ ಬಿಗ್ ಅಪ್ಡೇಟ್
ಇನ್ನೇನು ಕೆಲವೇ ಘಂಟೆಗಳಲ್ಲಿ ಜಸ್ಪ್ರಿತ್ ಬುಮ್ರಾ ಗಾಯದ ಬಗ್ಗೆ ಬಿಗ್ ಅಪ್ಡೇಟ್ ಸಿಗಲಿದೆ. ಬುಮ್ರಾ ಸದ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಕ್ಯಾಂಪ್ನಲ್ಲಿ ಇದ್ದಾರೆ. ಇವರು ಗಾಯದ ಸಮಸ್ಯೆಯಿಂದ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಿಂದ ಹೊರಗುಳಿದಿದ್ರು. ಈಗ ಫಿಟ್ನೆಸ್ ವರದಿ ಆಧಾರದ ಮೇರೆ ಬಿಸಿಸಿಐ ಬುಮ್ರಾ ಲಭ್ಯತೆ ಬಗ್ಗೆ ಒಂದು ನಿರ್ಧಾರಕ್ಕೆ ಬರಲಿದೆ.
ಇದನ್ನೂ ಓದಿ: ಬಿಸಿಸಿಐನಿಂದ ಬಿಗ್ ಶಾಕ್; ಟೀಮ್ ಇಂಡಿಯಾದಿಂದ ಕೆ.ಎಲ್ ರಾಹುಲ್ಗೆ ಗೇಟ್ಪಾಸ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ