ನಾಳೆಯಿಂದ ಮೂರು ದಿನ ಭರ್ಜರಿ ಮಳೆ; ಮನೆಯಿಂದ ಹೊರಬರೋ ಮುನ್ನ ಎಚ್ಚರ!

author-image
Ganesh Nachikethu
Updated On
Rain Alert: ಇಂದು ಈ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ.. ಯೆಲ್ಲೋ ಅಲರ್ಟ್ ಘೋಷಣೆ
Advertisment
  • ಬಂಗಾಳಕೊಲ್ಲಿಯಲ್ಲಿ ಉಂಟಾದ ಭಾರೀ ಚಂಡಮಾರುತ
  • ಚಂಡಮಾರುತದ ಪರಿಣಾಮ ರಾಜಧಾನಿ ಬೆಂಗಳೂರಲ್ಲಿ ಮಳೆ
  • ಇನ್ನೂ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆಗಿದೆ. ಬೆಂಗಳೂರಲ್ಲಿ 2025ರ ವರ್ಷದ ಮೊದಲ ಮಳೆ ಸುರಿದಿದೆ.

ಇನ್ನು, ಬಿಸಿಲ ಬೇಗೆಯಿಂದ ಬೇಸತ್ತು ಹೋಗಿದ್ದ ಜನರಿಗೆ ಮಳೆ ತಂಪರೆದಿದೆ. ಇಂದು ನಗರದ ವಿವಿಧ ಏರಿಯಾಗಳಲ್ಲಿ ಮಳೆ ಆಗಿತ್ತು. ಹೀಗೆ ನಾಳೆಯಿಂದ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಮುದ್ರ ಮೇಲ್ಮೈನಲ್ಲಿ ಹವಾಮಾನ ವೈಪರಿತ್ಯ ಉಂಟಾಗಿದೆ. ಹೀಗಾಗಿ ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಇಷ್ಟೇ ಅಲ್ಲ ಪಕ್ಕದ ರಾಜ್ಯ ತಮಿಳುನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಿಲಿಕಾನ್​ ಸಿಟಿ ಬೆಂಗಳೂರಲ್ಲೂ ಮೂರು ದಿನ ಇದೇ ರೀತಿ ವಾತಾವರಣ ಇರಲಿದೆ. ಬುಧವಾರ ಬೆಳಗ್ಗೆಯಿಂದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಜೋರು ಮಳೆ ಆಗಲಿದೆ. ಭಾರೀ ಮಳೆ ಮುನ್ಸೂಚನೆ ನೀಡಿರೋ ಹವಾಮಾನ ಇಲಾಖೆ ಕಟ್ಟೆಚ್ಚರ ವಹಿಸಿ ಎಂದು ಹೇಳಿದೆ.

ಇದನ್ನೂ ಓದಿ:ನಟ ದರ್ಶನ್​​​ ಶಾಕಿಂಗ್​ ನಿರ್ಧಾರ; ತನ್ನ ಆಪ್ತರಿಗೆ ಗೇಟ್​ಪಾಸ್​ ನೀಡಲು ಕಾರಣವೇನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment