/newsfirstlive-kannada/media/post_attachments/wp-content/uploads/2025/03/ranjith9.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿಯಾಗಿದ್ದ ರಂಜಿತ್ ಕುಮಾರ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಬಿಗ್ಬಾಸ್ ಮೂಲಕ ಖ್ಯಾತಿ ಪಡೆದುಕೊಂಡಿದ್ದ ನಟ ರಂಜಿತ್ ಅವರು ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ರಶ್ಮಿಕಾ ಬೆನ್ನಿಗೆ ನಿಂತ ರಮ್ಯಾ.. ಅವಹೇಳನ ಮಾಡ್ತಿರೋರಿಗೆ ಪದ್ಮಾವತಿ ಹಿಗ್ಗಾಮುಗ್ಗಾ ತರಾಟೆ..!
ಬಿಗ್ಬಾಸ್ ಸೀಸನ್ 11ಕ್ಕೆ ಕೊನೆಯ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದ ರಂಜಿತ್ ಅವರು ಪ್ರೀತಿಸಿದ ಹುಡುಗಿ ಜೊತೆಗೆ ಎಂಗೇಜ್ ಆಗಿದ್ದಾರೆ. ರಂಜಿತ್ ಅವರು ನಿಶ್ಚಿತಾರ್ಥ ಮಾಡಿಕೊಂಡಿರೋ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಇನ್ನೂ, ರಂಜಿತ್ ಅವರು ಪ್ರೀತಿಸಿದ ಹುಡುಗಿ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ರಂಜಿತ್ ಅವರು ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿಯ ಹೆಸರು ಮಾನಸಾ ಗೌಡ. ಇವರು ಫ್ಯಾಷನ್ ಡಿಸೈನರ್ ಆಗಿದ್ದಾರೆ.
ನಟ ರಂಜಿತ್ ಹಾಗೂ ಮಾನಸಾ ಗೌಡ ಅವರ ನಿಶ್ಚಿತಾರ್ಥಕ್ಕೆ ಬಿಗ್ಬಾಸ್ ಸ್ಪರ್ಧಿಗಳು ಕೂಡ ಆಗಮಿಸಿದ್ದರು. ಮೋಕ್ಷಿತಾ ಪೈ, ಐಶ್ವರ್ಯ ಸಿಂಧೋಗಿ, ಶಿಶಿರ್ ಶಾಸ್ತ್ರಿ, ಅನುಷಾ ರೈ ಹಾಗೂ ಭವ್ಯಾ ಗೌಡ ಬಂದಿದ್ದರು.
ಸದ್ಯ ರಂಜಿತ್ ಹಾಗೂ ಮಾನಸಾ ಗೌಡ ಅವರ ಮದುವೆ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆದ್ರೆ ಶೀಘ್ರದಲ್ಲೇ ಈ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ರಂಜಿತ್ ಅವರ ನಿಶ್ಚಿತಾರ್ಥ ಫೋಟೋಗಳನ್ನು ನೋಡಿದ ಅಭಿಮಾನಿಗಳು ಶುಭ ಕೋರಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ