/newsfirstlive-kannada/media/post_attachments/wp-content/uploads/2023/11/bigg-boss-2023-11-17T175333.927.jpg)
ನಾನು ಪ್ರೆಗ್ನೆಂಟ್ ಆಗಿದ್ದೇನೆ ದಯವಿಟ್ಟು ನನಗೆ ಮನೆಯಿಂದ ಆಚೆ ಕಳುಹಿಸಿ ಎಂದು ಹಿಂದಿ ಬಿಗ್‌ಬಾಸ್ ಸ್ಪರ್ಧಿ ನಟಿ ಅಂಕಿತಾ ಲೋಖಂಡೆ ಮನವಿ ಮಾಡಿದ್ದಾರೆ. ಇದೇ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸದ್ಯ ಹಿಂದಿ ಬಿಗ್‌ಬಾಸ್ ಸೀಸನ್ 17ರಲ್ಲಿ ನಟಿ ಅಂಕಿತಾ ಲೋಖಂಡೆ ಮತ್ತು ಪತಿ ವಿಕ್ಕಿ ಜೈನ್ ಇಬ್ಬರೂ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಇದೇ ಮೊದಲ ಬಾರಿಗೆ ಇಂಥದ್ದೊಂದು ಸುದ್ದಿ ಹಿಂದಿ ಬಿಗ್‌ಬಾಸ್ ಸೀಸನ್ 17ರಲ್ಲಿ ಕೇಳಿ ಬಂದಿದೆ. ಈ ಕುರಿತಂತೆ ಬಿಗ್‌ಬಾಸ್ ತಂಡದಿಂದ ಯಾವುದೇ ಮಾಹಿತಿ ಬಂದಿಲ್ಲ. ಹೀಗೆ ನಟಿ ಅಂಕಿತಾ ಅವರು ನನಗೆ ಹುಳಿ ತಿನ್ನಬೇಕೆಂದು ಅನಿಸುತ್ತಿದೆ. ಈ ಬಾರಿ ತಮಗೆ ಪಿರಿಯಡ್ಸ್ ಮಿಸ್ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಜೋಡಿಗೆ ಶುಭಾಶಯ ಕೋರುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ