/newsfirstlive-kannada/media/post_attachments/wp-content/uploads/2025/03/Rakshak-bullet-on-Chamundi-God-1.jpg)
ರಜತ್, ವಿನಯ್ ಗೌಡ ಜೈಲು ಸೇರಿರುವಾಗಲೇ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿಗೆ ಟೆನ್ಷನ್ ಶುರುವಾಗಿದೆ. ಹಿಂದೂ ಸಂಘಟನೆಗಳು ಇಂದು ರಕ್ಷಕ್ ಬುಲೆಟ್ ವಿರುದ್ಧ ದೂರು ನೀಡಲು ಸಜ್ಜಾಗಿವೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್ ಅವಹೇಳನಕಾರಿಯಾಗಿ ಮಾತನಾಡಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
ರಕ್ಷಕ್ ಬುಲೆಟ್ ವಿರುದ್ಧ ಇಂದು ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್ ಅವರು ಸಹಸ್ಪರ್ಧಿ, ಪಕ್ಕದಲ್ಲಿದ್ದ ಹುಡುಗಿಯನ್ನು ಹೊಗಳುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ರಕ್ಷಕ್ ಬುಲೆಟ್ ಅವರ ಅವಹೇಳನ ವಿಡಿಯೋ ವೈರಲ್ ಆಗಿದ್ದು, ಭಾರೀ ಟೀಕೆ ವ್ಯಕ್ತವಾಗಿದೆ.
ಹಿಂದೂ ಸಂಘಟನೆ ಆರೋಪ ಏನು?
ಖಾಸಗಿ ಶೋನಲ್ಲಿ ರಕ್ಷಕ್ ಬುಲೆಟ್ ಅವರು ನಾಡದೇವಿ ಚಾಮುಂಡೇಶ್ವರಿಗೆ ಅವಹೇಳನ ಮಾಡಿರುವ ಆರೋಪಕ್ಕೆ ತುತ್ತಾಗಿದ್ದಾರೆ. ರಕ್ಷಕ್ ಆಡಿರೋ ಮಾತುಗಳನ್ನು ಖಂಡಿಸಿರುವ ಹಿಂದೂ ಸಂಘಟನೆಗಳು ದೂರು ಸಲ್ಲಿಸುತ್ತಿದ್ದಾರೆ.
ರಕ್ಷಕ್ ಬುಲೆಟ್ ಹೇಳಿದ್ದೇನು?
ಭರ್ಜರಿ ಬ್ಯಾಚುಲರ್ಸ್ ವೇದಿಕೆಯಲ್ಲಿ ರಕ್ಷಕ್ ಬುಲೆಟ್ ಅವರು ದರ್ಶನ್ ಹಾಗೂ ರಚಿತಾ ರಾಮ್ ಅಭಿನಯದ ಬುಲ್ ಬುಲ್ ಸಿನಿಮಾದ ದೃಶ್ಯವನ್ನು ಕಾಪಿ ಮಾಡಲು ಹೋಗಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಹುಡುಗಿಯನ್ನು ಹೊಗಳುವ ಭರದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ.
ಇದನ್ನೂ ಓದಿ: ರೀಲ್ಸ್ ಕೇಸ್‌ಗೆ ಇಂದು ಮೆಗಾ ಟ್ವಿಸ್ಟ್.. ಬಿಗ್‌ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡಗೆ ಮತ್ತೊಂದು ಸಂಕಷ್ಟ?
ಸ್ಟೇಜ್ ಮೇಲೆ ರಕ್ಷಕ್ ಬುಲೆಟ್ ಅವರು ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟು ಹಾಕೊಂಡು ಸ್ವಿಟ್ಜರ್ಲೆಂಡ್‌ನಲ್ಲಿ ಟ್ರಿಪ್ ಹೊಡಿತಿದ್ದಾಳೆ ಅನ್ನಿಸ್ತಿದೆ ಎಂದು ರಕ್ಷಕ್ ಬುಲೆಟ್ ಅವರು ಡೈಲಾಗ್ ಹೊಡೆದಿದ್ದಾರೆ.
ರಕ್ಷಕ್ ಬುಲೆಟ್ ಅವರ ಈ ಮಾತು ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ. ಹೀಗಾಗಿ ಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಹಾಗೂ ಖಾಸಗಿ ವಾಹಿನಿಯಲ್ಲಿ ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ