/newsfirstlive-kannada/media/post_attachments/wp-content/uploads/2025/04/rajath-kishan1.jpg)
ಬೆಂಗಳೂರು: ನ್ಯಾಯಾಲಯದಿಂದ ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ನಗರದ 24ನೇ ಎಸಿಜೆಎಂ ಕೋರ್ಟ್ ರಜತ್ ಕಿಶನ್‌ಗೆ ಜಾಮೀನು ಮಂಜೂರು ಮಾಡಿದೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರನ್ನು ಪೊಲೀಸರು ನಿನ್ನೆ ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದರು. ಈ ವೇಳೆ ಕೋರ್ಟ್ ರಜತ್ ಕಿಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದರ ಬೆನ್ನಲ್ಲೇ ರಜತ್ ಕಿಶನ್ ಅವರಿಗೆ ಇಂದು ಜಾಮೀನು ಮಂಜೂರು ಮಾಡಲಾಗಿದೆ.
ಇದನ್ನೂ ಓದಿ:ತನ್ನ ಗರಡಿಯಲ್ಲಿ ಆಡಿದ ಮಾಜಿ ಆಟಗಾರರೇ RCBಗೆ ವಿರೋಧಿಗಳು ಆಗ್ತಾರಾ.. ಹೇಗೆ ಗೊತ್ತಾ?
ಈ ರೀಲ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್‌ಗೆ ಮಾತ್ರ ವಾರೆಂಟ್ ಇತ್ತು. ವಿನಯ್‌ಗೌಡಗೆ ವಾರೆಂಟ್ ಇರಲಿಲ್ಲ. ಹೀಗಾಗಿ ವಿನಯ್ ಗೌಡ ಅವರಿಗೆ ನಿನ್ನೆಯೇ ರಿಲೀಫ್ ಸಿಕ್ಕಿತ್ತು. ರಜತ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆದರೆ ರಜತ್ ಪರ ವಕೀಲರು ಕೋರ್ಟ್‌ಗೆ ನಿನ್ನೆಯೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ಮಾಡಿ ಆದೇಶ ಇಂದಿಗೆ ಕಾಯ್ದಿರಿಸಿತ್ತು. ಅದರಂತೆ 24ನೇ ಎಸಿಜೆಎಂ ನ್ಯಾಯಾಲಯ ಜಾಮೀನು ನೀಡಿದೆ.
ಬಸವೇಶ್ವರ ನಗರ ಪೊಲೀಸರು ರಜತ್‌ರನ್ನು ನಿನ್ನೆ ಕೋರ್ಟ್‌ಗೆ ಹಾಜರುಪಡಿಸಿದ್ದರು. ಕೋರ್ಟ್ನಲ್ಲಿ ಈ ವೇಳೆ ರಜತ್ ಪರ ವಕೀಲರು ವಿಚಾರಣೆಗೆ ಅಂತ ಪೊಲೀಸ್ ಠಾಣೆಗೆ ಹೋಗಿದ್ದಾಗ ಬಂಧಿಸಲಾಗಿದೆ ಎಂದು ಹೇಳಿದ್ದರು. ಆಗ ಆರೋಪಿ ಪರ ವಕೀಲರು ಸ್ವಾಮಿ ಅದು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಇನ್ನು ಮುಂದೆ ಈ ರೀತಿ ಆಗಲ್ಲ ಸ್ವಾಮಿ. ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ. ವಾರೆಂಟ್ ರೀ ಕಾಲ್ ಮಾಡಿಕೊಡಿ ಸ್ವಾಮಿ ಎಂದು ಕೋರ್ಟ್‌ಗೆ ಮನವಿ ಮಾಡಿದ್ದರು. ಅದರಂತೆ ಕೋರ್ಟ್ ವಾದ-ಪ್ರತಿವಾದ ಆಲಿಸಿ ಇಂದು ಜಾಮೀನು ಮಂಜೂರು ಮಾಡಿದೆ. ಇದರಿಂದ ಪ್ರಕರಣದಲ್ಲಿ ರಜತ್ ಕಿಶನ್‌ಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ