/newsfirstlive-kannada/media/post_attachments/wp-content/uploads/2025/02/sonu-gowda2.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಒಟಿಟಿ ಸೀಸನ್ 1ರ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಬಿಗ್ಬಾಸ್ ಮನೆಗೆ ಹೋಗಿದ್ದಾಗಲೂ ಸಖತ್ ಸುದ್ದಿಯಲ್ಲಿದ್ದರು ಸೋನು ಗೌಡ. ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದೇನೆ ಅಂತ ಹೇಳಿ ಶಾಕ್ ಕೊಟ್ಟಿದ್ದರು.
ಇದನ್ನೂ ಓದಿ:ಮಹಾ ಕುಂಭಮೇಳದಲ್ಲಿ ಬಿಗ್ಬಾಸ್ ಸ್ಪರ್ಧಿ; ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ನಟಿ ಅನುಷಾ ರೈ
ಇದೀಗ ಖಡಕ್ ಪೊಲೀಸ್ ಅಧಿಕಾರಿ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಹೌದು, ಸೋಷಿಯಲ್ ಮೀಡಿಯಾದಲ್ಲಿ ಹೊಸ ಹೊಸ ರೀಲ್ಸ್ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದ ಸೋನು ಶ್ರೀನಿವಾಸ್ ಈಗ ಪೊಲೀಸ್ ಅಧಿಕಾರಿ ವಸ್ತ್ರವನ್ನು ಧರಿಸಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
View this post on Instagram
ಮೊಟ್ಟ ಮೊದಲ ಬಾರಿಗೆ ಸೋನು ಗೌಡ ಪೊಲೀಸ್ ಅಧಿಕಾರಿಯಂತೆ ಬಟ್ಟೆಯನ್ನು ಧರಿಸಿಕೊಂಡಿದ್ದಾರೆ. ಇದೇ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಸೋನು ಗೌಡ ಪೊಲೀಸ್ ಸಮವಸ್ತ್ರವನ್ನು ಧರಿಸಿರೋದಕ್ಕೆ ಒಂದು ಕಾರಣವಿದೆ. ಅದು ಏನೆಂದರೆ ಸೋನು ಗೌಡ ವೆಸ್ ಸೀರಿಸ್ನಲ್ಲಿ ಪೊಲೀಸ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೀಗಾಗಿ ಸೋನು ಗೌಡ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯ ಹಾಗೇ ರೆಡಿಯಾಗಿದ್ದಾರೆ. ಇನ್ನೂ ಸೋನು ಗೌಡರನ್ನು ಪೊಲೀಸ್ ಗೆಟಪ್ನಲ್ಲಿ ನೋಡಿದ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ