/newsfirstlive-kannada/media/post_attachments/wp-content/uploads/2025/03/ranjith2.jpg)
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿಯಾಗಿದ್ದ ರಂಜಿತ್ ಕುಮಾರ್ ಅವರು ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:SSLC ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್.. ಯಾವ್ಯಾವ ವಿಷಯ ಸೋರಿಕೆ ಆಗಿವೆ?
ಹೌದು, ಬಿಗ್ಬಾಸ್ ಸೀಸನ್ 11ಕ್ಕೆ ಕೊನೆಯ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದ ರಂಜಿತ್ ಅವರು ಪ್ರೀತಿಸಿದ ಹುಡುಗಿ ಜೊತೆಗೆ ಎಂಗೇಜ್ ಆಗಿದ್ದಾರೆ.
ರಂಜಿತ್ ಅವರು ನಿಶ್ಚಿತಾರ್ಥ ಮಾಡಿಕೊಂಡಿರೋ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇನ್ನೂ, ರಂಜಿತ್ ಅವರು ಪ್ರೀತಿಸಿದ ಹುಡುಗಿ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ.
ರಂಜಿತ್ ಅವರು ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿಯ ಹೆಸರು ಮಾನಸಾ ಗೌಡ. ಇವರು ವೃತ್ತಿಯಲ್ಲಿ ಫ್ಯಾಷನ್ ಡಿಸೈನರ್ ಆಗಿದ್ದಾರೆ. ಸದ್ಯ ಇದೇ ಫೋಟೋಗಳನ್ನು ನೋಡಿದ ಅಭಿಮಾನಿಗಳು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ