ಬಹುದಿನದ ಕನಸು ನನಸು ಮಾಡಿಕೊಂಡ ಬಿಗ್​​ಬಾಸ್​ ವಿನ್ನರ್​ ಮಂಜು ಪಾವಗಡ; ಏನದು?

author-image
Veena Gangani
Updated On
ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ಬಿಗ್​ಬಾಸ್​ ವಿನ್ನರ್​ ಮಂಜು ಪಾವಗಡ
Advertisment
  • ಬಿಗ್​ಬಾಸ್​ ಮನೆಯಲ್ಲಿದ್ದಾಗ ಈ ಆಸೆಯ ಬಗ್ಗೆ ಹೇಳಿಕೊಂಡಿದ್ದ ನಟ
  • ಕನ್ನಡದ ಬಿಗ್​ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದ ಮಂಜು ಪಾವಗಡ
  • ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ ಮಂಜು ಫೋಟೋಸ್

ಮಂಜು ಪಾವಗಡ ಯಾರಿಗೇ ತಾನೇ ಗೊತ್ತಿಲ್ಲ ಹೇಳಿ. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮಂಜು ಪಾವಗಡ ಚಿರಪರಿಚಿತ. ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಶೋ ಮೂಲಕ ಎಲ್ಲರ ಮನೆಮಾತಾಗಿರೋ ನಟ ಮಂಜು ಪಾವಗಡ ಅವರು ತಮ್ಮ ಬಹು ದಿನಗಳ ಆಸೆಯನ್ನು ಈಡೇರಿಸಿಕೊಂಡಿದ್ದಾರೆ.

publive-image

ಇದನ್ನೂ ಓದಿ:Kalki 2898AD ಟ್ರೇಲರ್​ ನೋಡಿದ್ರಾ? ನಿಮಗಿದೆ 1 ಲಕ್ಷ ರೂಪಾಯಿ ಬಹುಮಾನ ಗೆಲ್ಲೋ ಅವಕಾಶ! ಮಿಸ್​​ ಮಾಡ್ಬೇಡಿ

ಹೌದು, ಬಿಗ್​ಬಾಸ್​ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡ ಹ್ಯಾಸನಟ ಮಂಜು ಪಾವಗಡ ಅವರು ಹೊಸ ಮನೆಗೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿಯೇ ಮಂಜು ಪಾವಗಡ ಅವರು ತಮ್ಮ ಹೊಸ ಮನೆಗೆ ಪ್ರವೇಶ ಮಾಡಿದ್ದಾರೆ. ಸದ್ಯ ಇದೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​​ ಆಗಿವೆ. ಇನ್ನು ಮಂಜು ಪಾವಗಡ ಅವರ ಹೊಸ ಮನೆಗೆ ನಟ ರಾಜೀವ್, ಅಂಕಿತಾ ಜಯರಾಮ್ ಸೇರಿದಂತೆ ಮುಂತಾದವರು ಆಗಮಿಸಿದ್ದಾರೆ.

publive-image

ಬಿಗ್​ಬಾಸ್ ಶೋನಲ್ಲಿ ಬೆಂಗಳೂರಿನಲ್ಲಿ ಮನೆ ಮಾಡಬೇಕು ಎಂಬ ಆಸೆಯನ್ನು ವ್ಯಕ್ತಪಡಿಸಿದ್ದರು. ಈಗ ಅವರ ಬಹುದಿನಗಳ ಆಸೆಯನ್ನು ಈಡೇರಿಸಿಕೊಂಡಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಗೊತ್ತಾಗುತ್ತಿದ್ದಂತೆ ಮಂಜು ಪಾವಗಡ ಅವರ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಜೊತೆಗೆ ಆ ದೇವರು ನಿಮಗೆ ಆಯಸ್ಸು, ಆರೋಗ್ಯ, ಐಶ್ವರ್ಯ ಎಲ್ಲಾವನ್ನು ಕೊಟ್ಟು ಕಾಪಾಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಅಂತ ಕಾಮೆಂಟ್​ ಮಾಡಿದ್ದಾರೆ. ಸದ್ಯ ಮಂಜು ಪಾವಗಡ ಅವರು ಸದ್ಯ ಗಿಚ್ಚಿ ಗಿಲಿಗಿಲಿ ರಿಯಾಲಿಟಿ ಶೋ, ಅಂತರಪಟ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಅವರ ನಟನೆಗೆ ಅಭಿಮಾನಿಗಳು ಬಹುಪರಾಕ್​ ಹೇಳುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment