newsfirstkannada.com

ದರ್ಶನ್​ಗಾಗಿ ಬರ್ತ್​ಡೇ ಕ್ಯಾನ್ಸಲ್​ ಮಾಡಿದ್ರಾ ರಕ್ಷಕ್​​? ಹೀಗ್ಯಾಕಂದ್ರು ಮರಿ ಬುಲೆಟ್

Share :

Published June 17, 2024 at 3:13pm

Update June 17, 2024 at 3:14pm

  ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ ಬಿಗ್​ಬಾಸ್​ ಮಾಜಿ ಸ್ಪರ್ಧಿ

  ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ 10ಕ್ಕೆ ಎಂಟ್ರಿ ಕೊಟ್ಟಿದ್ದ ರಕ್ಷಕ್ ಬುಲೆಟ್

  ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಆ ಸ್ಟಾರ್​ ಬಗ್ಗೆ ರಕ್ಷಕ್ ಬುಲೆಟ್ ಭಾವುಕ ಪೋಸ್ಟ್​

ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​​ 10ರ ಮೂಲಕ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್​​ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದರು. ಸದ್ಯ ಹೊಸ ಸಿನಿಮಾದಲ್ಲಿ ನಟಿಸಲು ಬಹಳ ಉತ್ಸಾಹದಲ್ಲಿದ್ದಾರೆ. ಜೊತೆಗೆ ಹೀರೋ ಆಗಿ ಲಾಂಚ್ ಆಗುವುದಕ್ಕೆ ಸಾಕಷ್ಟು ತಯಾರಿಗಳನ್ನು ನಡೆಸುತ್ತಿದ್ದಾರೆ.

ಬಿಗ್​ಬಾಗ್​ ಮಾಜಿ ಸ್ಪರ್ಧಿಯಾಗಿದ್ದರು ರಕ್ಷಕ್ ಬುಲೆಟ್ ಅವರು ಗುರು ಶಿಷ್ಯರು ಸಿನಿಮಾದ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟಿದ್ದರು. ಬಳಿಕ ಬಿಗ್​ಬಾಸ್‌ ಮನೆಗೆ ಎಂಟ್ರಿ ಕೊಟ್ಟು ಮತ್ತಷ್ಟು ಜನಪ್ರಿಯತೆಯನ್ನು ಪಡೆದುಕೊಂಡರು. ಆದರೆ ಇದರ ಮಧ್ಯೆ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್​ವೊಂದನ್ನು ಕೊಟ್ಟಿದ್ದಾರೆ. ಹೌದು, ರಕ್ಷಕ ಬುಲೆಟ್​ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಈ ವರ್ಷ ನನ್ನ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ ಅಂತ ಹೇಳಿದ್ದಾರೆ. ಸದ್ಯ ರಕ್ಷಕ್ ಬುಲೆಟ್​ ಶೇರ್ ಮಾಡಿಕೊಂಡ ಪೋಸ್ಟ್​ ನೋಡಿದ ಅಭಿಮಾನಿಗಳು ಶಾಕ್​ ಆಗಿದ್ದಾರೆ.

View this post on Instagram

A post shared by rakshak sena (@rakshak_bullet)

ರಕ್ಷಕ್ ಬುಲೆಟ್ ಶೇರ್ ಮಾಡಿಕೊಂಡ ಪೋಸ್ಟ್​ನಲ್ಲಿ ಏನಿದೆ?

ಎಲ್ಲರಿಗೂ ನಮಸ್ಕಾರ ಹಾಗೂ ‘ಫಾದರ್ಸ್ ಡೇ’ ನ ಶುಭಾಶಯಗಳು. ಇವತ್ತು ಬೆಳಗ್ಗೆಯಿಂದ ನನ್ನ ತಂದೆಯ ನೆನಪು ನನ್ನನ್ನು ತುಂಬಾ ಕಾಡುತ್ತಿದೆ. ಎಲ್ಲರಂತೆ ನನಗೂ ಕೂಡ ನನ್ನ ತಂದೆಯೇ ಮೊದಲ ಹೀರೋ. ಹೀರೋ ಅಷ್ಟೇ ಅಲ್ಲ ಒಳ್ಳೆಯ ಮಾರ್ಗದರ್ಶಕರು ಹಾಗೂ ಸ್ನೇಹಿತರು ಕೂಡ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ. ಮುಂದಿನ ವರ್ಷದ ಹುಟ್ಟು ಹಬ್ಬದಷ್ಟರಲ್ಲಿ ಏನಾದರೂ ಒಂದು ಸಾಧನೆ ಮಾಡಿರುತ್ತೇನೆ. ಆಗ ನನ್ನ ಎಲ್ಲ ಸ್ನೇಹಿತರು, ಹಿತೈಷಿಗಳು, ಗುರು-ಹಿರಿಯರು ಹಾಗೂ ಪ್ರೀತಿ ಪಾತ್ರರೊಂದಿಗೆ ಆಚರಣೆ ಮಾಡುತ್ತೇನೆ. ಹೀಗೆ ನಿಮ್ಮ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದ ನನ್ನ ಮೇಲಿರಲಿ ನನ್ನನ್ನು ಬೆಂಬಲಿಸುತ್ತಿರುವ ಎಲ್ಲ ನನ್ನ ಸ್ನೇಹಿತರು, ಪ್ರೀತಿ ಪಾತ್ರರು, ಮಾಧ್ಯಮ ಮಿತ್ರರು,ಟ್ರೋಲ್ ಪೇಜ್‌ಗಳು, ಯೂಟ್ಯೂಬ್‌ರ್ಸ್‌ ಹಾಗೂ ಎಲ್ಲಾ ಸಾಮಾಜಿಕ ಜಾಲತಾಣದ ಸ್ನೇಹಿತರಿಗೆ ಧನ್ಯವಾದಗಳು ಅಂತ ಬರೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್​ಗಾಗಿ ಬರ್ತ್​ಡೇ ಕ್ಯಾನ್ಸಲ್​ ಮಾಡಿದ್ರಾ ರಕ್ಷಕ್​​? ಹೀಗ್ಯಾಕಂದ್ರು ಮರಿ ಬುಲೆಟ್

https://newsfirstlive.com/wp-content/uploads/2024/06/rakshak-bullet-1.jpg

Load More