/newsfirstlive-kannada/media/post_attachments/wp-content/uploads/2024/10/sangeetha.jpg)
ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10ಕ್ಕೆ ಗ್ರ್ಯಾಂಡ್​ ಆಗಿ ಎಂಟ್ರಿ ಕೊಟ್ಟಿದ್ದ ಸಂಗೀತಾ ಶೃಂಗೇರಿ ಸಾಮಾಜಿಕ ಜಾಲತಾಣದಲ್ಲಿ ಸದಾ ಆ್ಯಕ್ಟೀವ್​ ಆಗಿದ್ದಾರೆ. ಬಿಗ್​​ಬಾಸ್​ನಿಂದ ಆಚೆ ಬಂದ ಬಳಿಕ ಸಂಗೀತಾ ಶೃಂಗೇರಿ ಅವರು ಯಾವುದೇ ಪ್ರಾಜೆಕ್ಟ್​ಗೆ ಕೈ ಹಾಕಿಲ್ಲ. ಆದರೆ ಬಿಗ್​ಬಾಸ್​ನಿಂದ ಹೊರ ಬಂದ ಬಳಿಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು.
ಆಗಾಗ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಆದರೆ ಈ ಭಾರೀ ತುಂಬಾ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಹೊಸ ಫೋಟೋಶೂಟ್​ ಮಾಡಿಸಿಕೊಳ್ಳುವ ಮೂಲಕ ಟ್ರೆಂಡಿಂಗ್​ನಲ್ಲಿದ್ದಾರೆ. ಕಳೆದ ಫೋಟೋ ಶೂಟ್​ನಲ್ಲಿ ಕೈಯಲ್ಲಿ ಕಮಲವನ್ನು ಹಿಡಿದುಕೊಂಡು ಪೋಸ್​​ ಕೊಟ್ಟಿದ್ದರು. ಇದೀಗ ಭರತನಾಟ್ಯ ಡ್ಯಾನ್ಸ್​ ಮಾಡುತ್ತ ಆಗಿ ಕಾಣಿಸಿಕೊಂಡಿದ್ದಾರೆ.
View this post on Instagram
ಇದೇ ವಿಡಿಯೋ ಕ್ಲಿಪ್​ ಹಾಗೂ ಫೋಟೋಗಳನ್ನು ತಮ್ಮ ಇನ್​ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಭರತನಾಟ್ಯ ಸೆಟ್​ನಲ್ಲಿ ಅದ್ಭುತವಾಗಿ ನೃತ್ಯ ಮಾಡಿದ್ದಾರೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಇದೇ ವಿಡಿಯೋ ನೋಡಿದ ಅಭಿಮಾನಿಗಳು ಎಷ್ಟು ಚಂದ ಅಲ್ಲ ನಮ್ಮ ಸಂಗೀತ ಶೃಂಗೇರಿ, ನಾಟ್ಯ ಮಯೂರಿ ಹಾಗಿ ಕಾಣುತ್ತಿದ್ದೀರಿ ಸಂಗೀತಾ, ಭೂಲೋಕದಿಂದ ಧರೆಗಿಳಿದ ದೇವತೆ ಎಂದು ಕಾಮೆಂಟ್ಸ್​ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ