Bigg Boss: ನಿರೂಪಕರಾಗಿ ಎಂಟ್ರಿ ಕೊಡಲು ಸಜ್ಜಾದ BBK10 ವಿನ್ನರ್​ ಕಾರ್ತಿಕ್​ ಮಹೇಶ್​!

author-image
Veena Gangani
Updated On
Bigg Boss: ನಿರೂಪಕರಾಗಿ ಎಂಟ್ರಿ ಕೊಡಲು ಸಜ್ಜಾದ BBK10 ವಿನ್ನರ್​ ಕಾರ್ತಿಕ್​ ಮಹೇಶ್​!
Advertisment
  • ವೀಕೆಂಡ್​ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ನೀಡಲು ರೆಡಿ
  • ಕಿರುತೆರೆಯಲ್ಲಿ ಸಂಚಲನವನ್ನು ಸೃಷ್ಟಿಸಲು ಸಜ್ಜಾಗುತ್ತಿದೆ ನೂತನ ಶೋ
  • ವಿನಯ್ ಗೌಡ, ನಮ್ರತಾ ಗೌಡ, ತನಿಷಾ ಕುಪ್ಪಂಡ, ರಕ್ಷಕ್ ಬುಲೆಟ್‌ ಭಾಗಿ

ಹೊಸ ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆಯಲ್ಲಿ ಹೊಸತನದ ಸಂಚಲನವನ್ನು ಸೃಷ್ಟಿಸಲು ಸಜ್ಜಾಗಿದೆ ಸ್ಟಾರ್ ಸುವರ್ಣ. ವೀಕೆಂಡ್​ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ರಸದೌತಣ ನೀಡಲು ಹೊತ್ತು ತರ್ತಿದೆ ಹೊಚ್ಚ ಹೊಸ ಶೋ. ಅದುವೇ ಸುವರ್ಣ ಸೆಲೆಬ್ರಿಟಿ ಲೀಗ್.

ಇದನ್ನೂ ಓದಿ: ನಾನಿನ್ನೂ ಆರೋಪಿ ಅಪರಾಧಿ ಅಲ್ಲ.. ಬಳ್ಳಾರಿ ಜೈಲಲ್ಲಿ ದರ್ಶನ್ ಮತ್ತೊಂದು ಕಿರಿಕ್‌; ಏನಂದ್ರು?

publive-image

ಇದೊಂದು ಕಿರುತೆರೆಯ ಜನಪ್ರಿಯ ಸೆಲೆಬ್ರಿಟಿಗಳನ್ನು ಒಳಗೊಂಡ ವಿನೂತನ ರೀತಿಯ ರಿಯಾಲಿಟಿ ಶೋ. ಇದರಲ್ಲಿ ಒಟ್ಟು 2 ತಂಡಗಳಿರುತ್ತದೆ. 10 ಜನ ಸೆಲೆಬ್ರಿಟಿ ಸ್ಪರ್ಧಿಗಳ ನಡುವೆ ಸರಿ ಸುಮಾರು 8 ವಾರಗಳ ಕಾಲ ನಡೆಯುವ ಸಮರ ಇದಾಗಿದೆ. ಈ ಜಟಾಪಟಿಯಲ್ಲಿ ಯಾವ ತಂಡ ಗೆದ್ದು "ಸುವರ್ಣ ಸೆಲೆಬ್ರಿಟಿ ಲೀಗ್" ಪಟ್ಟವನ್ನು ತನ್ನದಾಗಿಸಿಕೊಳ್ಳುತ್ತದೆ? ಎಂಬುದು ಈ ಕಾರ್ಯಕ್ರಮದ ಶೈಲಿಯಾಗಿದೆ. ಜೊತೆಗೆ ಮೋಜು-ಮಸ್ತಿ, ತರ್ಲೆ ತುಂಟಾಟದ ಜೊತೆ ಪೈಪೋಟಿಯ ಮಹಾ ಯುದ್ಧವೇ ನಡೆಯಲಿದೆ.

publive-image

ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ನಟನೆಯ ಮೂಲಕ ಕನ್ನಡಿಗರ ಮನಸ್ಸನ್ನು ಅದ್ದೂರಿಯಾಗಿ ಗೆದ್ದ ನಟ ಕಾರ್ತಿಕ್ ಮಹೇಶ್ ಇದೇ ಮೊದಲ ಬಾರಿಗೆ ‘ಸುವರ್ಣ ಸೆಲೆಬ್ರಿಟಿ ಲೀಗ್’ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಇದು ಈ ಕಾರ್ಯಕ್ರಮದ ಮತ್ತೊಂದು ವಿಶೇಷತೆ. ‘ಸುವರ್ಣ ಸೆಲೆಬ್ರಿಟಿ ಲೀಗ್’ ಶೋ ಲಾಂಚ್​ಗೆ ಭರ್ಜರಿಯಾಗಿ ತಯಾರಿ ನಡೆದಿದ್ದು, ಪ್ರೊಮೋಗಳಿಂದ ವೀಕ್ಷಕರಲ್ಲಿ ಕಾತುರತೆ ಹೆಚ್ಚಾಗಿದೆ.

ಇದನ್ನೂ ಓದಿ:ಯಾರೂ ಊಹಿಸಲಾಗದ ಟ್ವಿಸ್ಟ್​ ಪಡೆದುಕೊಂಡ ಶ್ರೀರಸ್ತು ಶುಭಮಸ್ತು; ಆ ಸುದ್ದಿ ಕೇಳಿ ಬೆಚ್ಚಿಬಿದ್ದ ವೀಕ್ಷಕರು

publive-image

10 ಸ್ಪರ್ಧಿಗಳಾಗಿ ಕಿರುತೆರೆ ಕಲಾವಿದರುಗಳಾದ ವಿನಯ್ ಗೌಡ, ನಮ್ರತಾ ಗೌಡ, 'ಕಥೆಯೊಂದು ಶುರುವಾಗಿದೆ' ಧಾರಾವಾಹಿ ಖ್ಯಾತಿಯ ಚಂದು ಗೌಡ, 'ಆಸೆ' ಧಾರಾವಾಹಿ ಖ್ಯಾತಿಯ ಪ್ರಿಯಾಂಕಾ ಮತ್ತು ನಿನಾದ್ ಹರಿತ್ಸ, 'ಗೌರಿಶಂಕರ' ಧಾರಾವಾಹಿ ಖ್ಯಾತಿಯ ಅಭಿಜ್ಞಾ ಭಟ್, ತನಿಷಾ ಕುಪ್ಪಂಡ, ಪ್ರಿಯಾಂಕಾ ಶಿವಣ್ಣ, ರಕ್ಷಕ್ ಬುಲೆಟ್ ಹಾಗೂ 'ಕಾಮಿಡಿ ಗ್ಯಾಂಗ್ಸ್' ಖ್ಯಾತಿಯ ಹಿತೇಶ್ ಭಾಗವಹಿಸಲಿದ್ದಾರೆ. ವಾರಾಂತ್ಯದಲ್ಲಿ ಶುರುವಾಗಲಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ "ಸುವರ್ಣ ಸೆಲೆಬ್ರಿಟಿ ಲೀಗ್" ಇದೇ ಭಾನುವಾರದಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment