/newsfirstlive-kannada/media/post_attachments/wp-content/uploads/2024/02/Drone-Pratap-HD-Kumaraswamy.jpg)
ಬಿಗ್‌ಬಾಸ್ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಡ್ರೋನ್ ಪ್ರತಾಪ್ ವಂಚಿಸಿದ್ದಾರೆ ಎಂದು ಮಂಡ್ಯದ ಚಂದನ್ ಕುಮಾರ್ ಗೌಡ ಎಂಬುವವರು ಆರೋಪಿಸಿದ್ದಾರೆ.
ಚಂದನ್ ಕುಮಾರ್ ಗೌಡ ಎಂಬುವವರಿಗೆ ಡ್ರೋನ್ ಪ್ರತಾಪ್ ಅವರಿಂದ 2 ಲಕ್ಷ ರೂಪಾಯಿ ಹಣ ವಂಚನೆ ಆಗಿದೆಯಂತೆ. ಜಿಲ್ಲಾಪಂಚಾಯಿತಿ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಲಾಗಿದೆ.
/newsfirstlive-kannada/media/post_attachments/wp-content/uploads/2024/02/Bigg-Boss-Drone-Pratap-1.jpg)
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಪರಿಚಯವಿದೆ. ನಾನು ಆಗಾಗ ಕುಮಾರಸ್ವಾಮಿಯವರ ಫಾರ್ಮ್ ಹೌಸ್‌ಗೆ ಹೋಗಿ ಭೇಟಿಯಾಗುತ್ತೇನೆಂದು ಡ್ರೋನ್ ಪ್ರತಾಪ್ ಹೇಳಿದ್ದರಂತೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಡ್ರೋನ್ ಪ್ರತಾಪ್ ವಂಚಿಸಿದ ಆರೋಪ ಕೇಳಿ ಬಂದಿದೆ. ಬಿಗ್ ಬಾಸ್‌ನಿಂದ ಹೊರ ಬಂದ ನಂತರ ಡ್ರೋನ್ ಪ್ರತಾಪ್ ಅವರು ನನ್ನ ಕರೆ ಸ್ವೀಕರಿಸುತ್ತಿಲ್ಲ. ಹಣ ಹಿಂದಿರುಗಿಸದೆ ವಂಚಿಸಿದ್ದಾರೆ. ಹೀಗಾಗಿ ಡ್ರೋನ್ ಪ್ರತಾಪ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಚಂದನ್ ಕುಮಾರ್ ಗೌಡ ಮನವಿ ಮಾಡಿದ್ದಾರೆ.
/newsfirstlive-kannada/media/post_attachments/wp-content/uploads/2024/02/Drone-Pratap-Bigg-Boss-5.jpg)
ಡ್ರೋನ್ ಪ್ರತಾಪ್ ಅವರ ತೆಗೆದ ಫೋಟೋ ಹಾಗೂ ಮಾತನಾಡಿರುವ ಆಡಿಯೋವನ್ನು ಚಂದನಗೌಡ ಅವರು ರಿಲೀಸ್ ಮಾಡಿದ್ದಾರೆ. ಡ್ರೋನ್ ಪ್ರತಾಪ್ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ನನ್ನನ್ನು ಕಾಂಗ್ರೆಸ್‌ಗೆ ಬನ್ನಿ ಯೂತ್ ಕಾಂಗ್ರೆಸ್ ಪ್ರೆಸಿಡೆಂಟ್ ಮಾಡ್ತೀನಿ ಅಂದಿದ್ರು. ಆಗ ನಾನು ಕುಮಾರಸ್ವಾಮಿಯವರ ಜೊತೆ ಓಡಾಡುತ್ತಿದ್ದೆ. ಈಗಲೂ ಕುಮಾರಸ್ವಾಮಿಯವರನ್ನು ಭೇಟಿ ಮಾಡಲು ಹೋಗುತ್ತೇನೆ. ಆದರೆ ಕುಮಾರಸ್ವಾಮಿಯವರ ಜೊತೆಗಿನ ಫೋಟೋ ಹಾಕಲ್ಲ. ಕುಮಾರಸ್ವಾಮಿ ಕೆಟ್ಟ ಪದ ಬೈಯಬಹುದು. ಆದರೆ ಒಳ್ಳೆಯ ಮನುಷ್ಯ. ಡಿಕೆ ಶಿವಕುಮಾರ್ ತರ ಪೇಪರ್ ಎಸೆಯೋದು ಮಾಡಲ್ಲ. ನನ್ನ ಜೊತೆ ಕುಮಾರಸ್ವಾಮಿಯವರ ತೋಟದ ಮನೆಗೆ ಬಾ ಪರಿಚಯ ಮಾಡಿಸುತ್ತೇನೆ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us