ಪೆನ್‌ಡ್ರೈವ್‌ ಸಿನಿಮಾ ಶುರು.. ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ತನಿಷಾ; ಹೀರೋ, ಕಲಾವಿದರು ಯಾರು?

author-image
Veena Gangani
Updated On
ಪೆನ್‌ಡ್ರೈವ್‌ ಸಿನಿಮಾ ಶುರು.. ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ತನಿಷಾ; ಹೀರೋ, ಕಲಾವಿದರು ಯಾರು?
Advertisment
  • ಬಿಗ್​ಬಾಸ್​ ಮೂಲಕ ಬೆಂಕಿ ಅಂತಲೇ ಫೇಮಸ್​ ಆದ ಕಿರುತೆರೆ ನಟಿ ತನಿಷಾ ಕುಪ್ಪಂಡ
  • ಹಾಸನ ಪೆನ್ ಡ್ರೈವ್ ವಿಚಾರಕ್ಕೂ ಈ ಸಿನಿಮಾದ ಪೆನ್ ಡ್ರೈವ್​ಗೂ ಸಂಬಂಧವೇನು?
  • ತನಿಷಾ ಕುಪ್ಪಂಡ, ರಾಧಿಕಾ ರಾಮ್, ಸಂಜನಾ ನಾಯ್ಡು ಸೇರಿ ಹಲವು ನಟಿಯರು ಭಾಗಿ

ಕನ್ನಡದ ಬಿಗ್​​ ರಿಯಾಲಿಟಿ ಶೊ ಬಿಗ್​ಬಾಸ್​ ಸೀಸನ್​ 10ರ ಸ್ಪರ್ಧಿಗಳು ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಆದರೆ ತನಿಷಾ ಕುಪ್ಪಂಡ ಅವರು ದೊಡ್ಡ ಮಟ್ಟದಲ್ಲಿ ಸದ್ದು ಮಾಡೋಕೆ ಶುರು ಮಾಡಿಬಿಟ್ಟಿದ್ದಾರೆ. ಹೌದು, ಬಿಗ್​ಬಾಸ್​ ಮನೆಯಿಂದ ಆಚೆ ಬಂದ ಬಳಿಕ ನಟಿ ತನಿಷಾ ಕುಪ್ಪಂಡ ಸುದ್ದಿಯಾಗುತ್ತಲೇ ಇರುತ್ತಾರೆ. ಈಗ ಡೇವಿಡ್ ಅವರ ಪೆನ್​ಡ್ರೈವ್​ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ.

publive-image

ಇದನ್ನೂ ಓದಿ: ಧ್ರುವ ಸರ್ಜಾ ಅವರ ಜಿಮ್ ಟ್ರೈನರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್.. ಅಸಲಿ ವಿಚಾರ ಬಯಲು..!

ಲಯನ್ ಆರ್ ವೆಂಕಟೇಶ್ ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದಲ್ಲಿ ತನಿಷಾ ಕುಪ್ಪಂಡ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದರು. ಆ ನೂತನ ಚಿತ್ರಕ್ಕೆ ಪೆನ್ ಡ್ರೈವ್ ಎಂದು ಹೆಸರಿಡಲಾಗಿದೆ‌. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ನಾರ್ ಕೆ ವಿಶ್ವನಾಥ್ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭ ಕೋರಿದರು. ವೆಂಕಟೇಶ್, ನರಸಿಂಹಲು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

publive-image


ಈವರೆಗೂ ಹದಿನೈದು ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ಸೆಬಾಸ್ಟಿನ್ ಡೇವಿಡ್, ಪೆನ್ ಡ್ರೈವ್ ಶೀರ್ಷಿಕೆ ನೀಡಿದ ವಾಣಿಜ್ಯ ಮಂಡಳಿಗೆ ಧನ್ಯವಾದ. ಪ್ರಸ್ತುತ ಚಾಲ್ತಿಯಲ್ಲಿರುವ ಪೆನ್ ಡ್ರೈವ್​ಗು ನಮ್ಮ ಚಿತ್ರದ ಶೀರ್ಷಿಕೆಗೂ ಯಾವುದೇ ಸಂಬಂಧವಿಲ್ಲ. ಈ ಚಿತ್ರದ ಕಥೆಯೇ ಬೇರೆ. ನಮ್ಮ ಚಿತ್ರದಲ್ಲಿ ಪೆನ್ ಡ್ರೈವ್ ಮುಖ್ಯಪಾತ್ರ ವಹಿಸುತ್ತದೆ. ಹಾಗಾಗಿ ಆ ಶೀರ್ಷಿಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಲಯನ್ ಎಸ್ ವೆಂಕಟೇಶ್ ಹಾಗೂ ಲಯನ್ ಆರ್ ವೆಂಕಟೇಶ್ ಅವರ ಸಹಕಾರದಿಂದ ಚಿತ್ರವನ್ನು ಬೇಗೆ ತೆರೆಗೆ ತರುವ ಪ್ರಯತ್ನ ಮಾಡುತ್ತೇನೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಹೆಚ್ಚಿನ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯಲಿದೆ. ತನಿಷಾ ಕುಪ್ಪಂಡ, ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ತಾರಾಬಳಗದಲ್ಲಿ ಹೆಚ್ಚಿನವರು ಮಹಿಳೆಯರೆ ಇರುತ್ತಾರೆ. ಡಾ||ವಿ.ನಾಗೇಂದ್ರ ಪ್ರಸಾದ್ ಗೀತರಚನೆ ಹಾಗೂ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ‌ ಎಂದಿದ್ದಾರೆ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು ಹಾಗಾಗಿ ಈ ಚಿತ್ರ ನಿರ್ಮಾಣಕ್ಕೆ ಮುಂದಾದೆವು. ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕರಾದ ಲಯನ್ ಎಸ್ ವೆಂಕಟೇಶ್ ಹಾಗೂ ಲಯನ್ ಆರ್ ವೆಂಕಟೇಶ್.

publive-image

ಇದನ್ನೂ ಓದಿ:ಮಣ್ಣಿನಡಿ ಬಚ್ಚಿಟ್ಟ ಸೂಟ್​​ಕೇಸ್​ ಹೊರ ತೆಗೆದ ರಶ್ಮಿಕಾ ಮಂದಣ್ಣ! ಕಂತೆ ಕಂತೆ ನೋಟು! ಇದು ಎಲ್ಲಿಂದ ಬಂತು?

ಇನ್ನು, ಇದೇ ವಿಚಾರವಾಗಿ ಮಾತಾಡಿದ ನಟಿ ತನಿಷಾ ಕುಪ್ಪಂಡ ಪೆನ್ ಡ್ರೈವ್ ಚಿತ್ರದ ಕಥೆ ಚೆನ್ನಾಗಿದೆ. ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಕೊಳ್ಳುತ್ತಿದ್ದೇನೆ ಅಂತ ತಿಳಿಸಿದರು. ಈ ಸಿನಿಮಾದಲ್ಲಿ ಚಿತ್ರದಲ್ಲಿ ನಟಿಸುತ್ತಿರುವ ರಾಧಿಕಾ ರಾಮ್, ಸಂಜನಾ ನಾಯ್ಡು, ಕರಿಸುಬ್ಬು ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಸಂಭಾಷಣೆ ಬರೆದು ಸಂಕಲನ ಮಾಡುತ್ತಿರುವ ನಾಗೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಆದರೆ ಈ ನೂತನ ಸಿನಿಮಾದಲ್ಲಿ ಹೀರೋ ಪಾತ್ರದಲ್ಲಿ ಯಾರು ಇರಲಿದ್ದಾರೆ ಎಂಬುವುದರ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿಲ್ಲ ಚಿತ್ರತಂಡ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment