/newsfirstlive-kannada/media/post_attachments/wp-content/uploads/2024/04/BIHAR.jpg)
ಪಾಟ್ನಾ: ಹೋಟೆಲ್​ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 6 ಜನರು ಸಜೀವವಾಗಿ ದಹನಗೊಂಡು ಸಾವನ್ನಪ್ಪಿದ್ದು ಹಲವು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬಿಹಾರದ ಪಾಟ್ನಾದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ರೈಲು ನಿಲ್ದಾಣದ ಸಮೀಪದ ಹೋಟೆಲ್​ನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸ್ಥಳದಲ್ಲೇ 6 ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಹೋಟೆಲ್ ಒಳಗಿದ್ದ ಹಲವರನ್ನು ರಕ್ಷಣೆ ಮಾಡಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿಸಿದ್ದಾರೆ. ಬೆಂಕಿಯಿಂದಾಗಿ ಹೋಟೆಲ್​​ನಲ್ಲಿನ ಎಲ್ಲ ವಸ್ತುಗಳೆಲ್ಲ ಸಂಪೂರ್ಣವಾಗಿ ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕೊಹ್ಲಿ, ಕಮ್ಮಿನ್ಸ್ ಮಧ್ಯೆ ಹೃದಯಸ್ಪರ್ಶಿ ಮಾತು.. ಇಂದು 300 ರನ್​ ಚಚ್ಚುವ ಮಾತುಕತೆಯೇ..?
Pal Hotel today near Patna Railway station. 👆 pic.twitter.com/o97OFaqAJs
— Vijay Kumar (@VijayKu12446785) April 25, 2024
ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕ್ರೇನ್ ತರಿಸಿಕೊಂಡ ಅದರ ಮೂಲಕ ಬಹು ಮಹಡಿ ಕಟ್ಟಡದ ಒಳಗಿದ್ದ ಜನರನ್ನು ರಕ್ಷಣೆ ಮಾಡಿದ್ದಾರೆ. ಮಾಹಿತಿ ಪ್ರಕಾರ ಹೋಟೆಲ್​ನಲ್ಲಿನ ಸುಮಾರು 45 ಜನರನ್ನು ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಕಿಯಿಂದಾಗಿ ಸುಟ್ಟಗಾಯಗಳಿಂದ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.
#Breaking Massive Fire at a hotel near Patna Railway station pic.twitter.com/dAhXUN8HW5
— Sneha Mordani (@snehamordani) April 25, 2024
ಹೋಟೆಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ಹೋಟೆಲ್​ನಲ್ಲಿ ಸುರಕ್ಷತಾ ಮಾನದಂಡಗಳನ್ನು ಸರಿಯಾಗಿ ಅನುಸರಿಸದ ಕಾರಣ 6 ಜನರ ಸಾವಿಗೆ ಕಾರಣವಾಗಿದೆ. ಸದ್ಯ ಈ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us