newsfirstkannada.com

ನಗರದ ರೈಲ್ವೆ ನಿಲ್ದಾಣ ಬಳಿ ಭಾರೀ ಅಗ್ನಿ ಅವಘಡ.. 6 ಜನರು ಸಜೀವ ದಹನ.. ಹಲವರು ಗಂಭೀರ

Share :

Published April 25, 2024 at 3:23pm

Update April 25, 2024 at 3:31pm

    ಸುಮಾರು 45ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಿದ ಪೊಲೀಸ್ರು

    ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ

    ಸುಟ್ಟ ಗಾಯಗಳಿಂದ ನಾಲ್ವರ ಸ್ಥಿತಿ ಗಂಭೀರ- ಆಸ್ಪತ್ರೆಯ ವೈದ್ಯರು

ಪಾಟ್ನಾ: ಹೋಟೆಲ್​ವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 6 ಜನರು ಸಜೀವವಾಗಿ ದಹನಗೊಂಡು ಸಾವನ್ನಪ್ಪಿದ್ದು ಹಲವು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬಿಹಾರದ ಪಾಟ್ನಾದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ರೈಲು ನಿಲ್ದಾಣದ ಸಮೀಪದ ಹೋಟೆಲ್​ನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸ್ಥಳದಲ್ಲೇ 6 ಜನರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಹೋಟೆಲ್‌ ಒಳಗಿದ್ದ ಹಲವರನ್ನು ರಕ್ಷಣೆ ಮಾಡಿದ್ದಾರೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿಸಿದ್ದಾರೆ. ಬೆಂಕಿಯಿಂದಾಗಿ ಹೋಟೆಲ್​​ನಲ್ಲಿನ ಎಲ್ಲ ವಸ್ತುಗಳೆಲ್ಲ ಸಂಪೂರ್ಣವಾಗಿ ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೊಹ್ಲಿ, ಕಮ್ಮಿನ್ಸ್ ಮಧ್ಯೆ ಹೃದಯಸ್ಪರ್ಶಿ ಮಾತು.. ಇಂದು 300 ರನ್​ ಚಚ್ಚುವ ಮಾತುಕತೆಯೇ..?

ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕ್ರೇನ್ ತರಿಸಿಕೊಂಡ ಅದರ ಮೂಲಕ ಬಹು ಮಹಡಿ ಕಟ್ಟಡದ ಒಳಗಿದ್ದ ಜನರನ್ನು ರಕ್ಷಣೆ ಮಾಡಿದ್ದಾರೆ. ಮಾಹಿತಿ ಪ್ರಕಾರ ಹೋಟೆಲ್​ನಲ್ಲಿನ ಸುಮಾರು 45 ಜನರನ್ನು ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೆಂಕಿಯಿಂದಾಗಿ ಸುಟ್ಟಗಾಯಗಳಿಂದ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ.

ಹೋಟೆಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಈ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ಹೋಟೆಲ್​ನಲ್ಲಿ ಸುರಕ್ಷತಾ ಮಾನದಂಡಗಳನ್ನು ಸರಿಯಾಗಿ ಅನುಸರಿಸದ ಕಾರಣ 6 ಜನರ ಸಾವಿಗೆ ಕಾರಣವಾಗಿದೆ. ಸದ್ಯ ಈ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಗರದ ರೈಲ್ವೆ ನಿಲ್ದಾಣ ಬಳಿ ಭಾರೀ ಅಗ್ನಿ ಅವಘಡ.. 6 ಜನರು ಸಜೀವ ದಹನ.. ಹಲವರು ಗಂಭೀರ

https://newsfirstlive.com/wp-content/uploads/2024/04/BIHAR.jpg

Load More