ಸಿಲಿಕಾನ್ ಸಿಟಿಯಲ್ಲಿ ಕ್ಲಿಲರ್ ಬಸ್ಗೆ MES ಕಾಲೇಜಿನ ವಿದ್ಯಾರ್ಥಿನಿ ಬಲಿ
ತಂದೆ ಜತೆ ಕಾಲೇಜಿಗೆ ಹೋಗುತ್ತಿದ್ದಾಗ ಬೈಕ್ಗೆ ಡಿಕ್ಕಿ ಹೊಡೆದ ಖಾಸಗಿ ಬಸ್
ಅಪಘಾತದಲ್ಲಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ತಂದೆ ಸತೀಶ್
ಬೆಂಗಳೂರು: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಗರದ ಜಾಲಹಳ್ಳಿ ಕ್ರಾಸ್ ಬಳಿ ಸಂಭವಿಸಿದೆ. ದೀಶಾ (18) ಮೃತ ವಿದ್ಯಾರ್ಥಿನಿ.
ಮೃತ ವಿದ್ಯಾರ್ಥಿನಿ ಮಲ್ಲೇಶ್ವರಂನ MES ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ವಿದ್ಯಾರ್ಥಿನಿ ದೀಶಾ ತಂದೆ ಜೊತೆ ಕಾಲೇಜಿಗೆ ಹೋಗುತ್ತಿದ್ದಾಗ ಬೈಕ್ಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ದೀಶಾ ಸಾವನ್ನಪ್ಪಿದ್ದಾಳೆ. ಈ ವೇಳೆ ಕೂದಲೆಳೆ ಅಂತರದಲ್ಲಿ ತಂದೆ ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದೀಶಾಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಬಸ್ ಚಾಲಕನ್ನು ಬಂಧಿಸಿದ್ದಾರೆ. ಈ ಸಂಬಂಧ ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ