ಚಿಕ್ಕೋಡಿ ನನದಿ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತ!
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅಣ್ಣ, ತಂಗಿ ಸಾವು
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ನುಜ್ಜುಗುಜ್ಜು
ಚಿಕ್ಕೋಡಿ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಣ್ಣ-ತಂಗಿ ದಾರುಣವಾಗಿ ಸಾವನ್ನಪ್ಪಿರೋ ಘಟನೆ ನನದಿ ಗ್ರಾಮದ ಬಳಿ ಸಂಭವಿಸಿದೆ. ಸದಲಗಾ ನಿವಾಸಿಗಳಾದ ಪ್ರಶಾಂತ ತುಳಸಿಕಟ್ಟಿ (22), ಪ್ರಿಯಾಂಕಾ ತುಳಸಿಕಟ್ಟಿ (20) ಮೃತ ಅಣ್ಣ, ತಂಗಿ.
ಬೆಳಗಾವಿಯಿಂದ ಸದಲಗಾದತ್ತ ತೆರಳುತ್ತಿದ್ದ ಕಾರು ಹಾಗೂ ಸದಲಗಾದಿಂದ ಚಿಕ್ಕೋಡಿ ಕಡೆ ಹೋಗುತ್ತಿದ್ದ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸದಲಗಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಣ್ಣ ಹಾಗೂ ತಂಗಿಯನ್ನು ಕೊಲ್ಹಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಅಣ್ಣ ತಂಗಿ ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ