/newsfirstlive-kannada/media/post_attachments/wp-content/uploads/2024/06/Truck-Accident.jpg)
ಚಿತ್ರದುರ್ಗ: ಮೈನ್ಸ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆಯೊಂದು ಬೆಳಕಿಗೆ ಬಂದಿದೆ. ಹೊಳಲ್ಕೆರೆ ತಾಲೂಕಿನ ಮುತುಗದೂರು- ಚಿಕ್ಕಜಾಜೂರು ರೈಲು ನಿಲ್ದಾಣಗಳ ಮಧ್ಯೆ ಈ ಅಪಘಾತ ಸಂಭವಿಸಿದೆ.
ಲಾರಿ ಹರಿದು ಸಾವನ್ನಪ್ಪಿರುವ ವ್ಯಕ್ತಿಯನ್ನ ಮುತುಗದೂರು ಗ್ರಾಮದ ವಾಗೇಶ್(65) ಎಂದು ಗುರುತಿಸಲಾಗಿದೆ. ಓವರ್​ಟೇಕ್ ಮಾಡಲು ಹೋಗಿ ಮೈನ್ಸ್ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಮೈನ್ಸ್​ ಲಾರಿ ಬೈಕ್ ಚಾಲಕನ ತಲೆಯ ಮೇಲೆ ಹರಿದಿದೆ. ತೋಟದ ಕೆಲಸ ಮುಗಿಸಿ ನಾಗೇಶ್​ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಚಿಕ್ಕಜಾಜೂರು ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us