newsfirstkannada.com

ಬೈಕ್- ಟಾಟಾ ಏಸ್ ನಡುವೆ ಭೀಕರ ಡಿಕ್ಕಿ.. ಸ್ಥಳದಲ್ಲೇ ಉಸಿರು ಚೆಲ್ಲಿದ ಮಹಿಳೆ

Share :

Published June 30, 2024 at 3:18pm

  ರಾಜ್ಯ ಹೆದ್ದಾರಿಯ ಚಿಂಚಣಿ ಟೋಲ್ ಬಳಿ ಮುಖಾಮುಖಿ ಡಿಕ್ಕಿ

  ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು

  ಘಟನೆಯಲ್ಲಿ ಗಾಯಗೊಂಡ ಸವಾರ ತಾಲೂಕಾಸ್ಪತ್ರೆಗೆ ದಾಖಲು

ಬೆಳಗಾವಿ: ಬೈಕ್ ಹಾಗೂ ಟಾಟಾ ಏಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಚಿಕ್ಕೋಡಿ ತಾಲೂಕಿನ ಚಿಂಚಣಿ ಟೋಲ್ ಬಳಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಧೋನಿ, ಕೊಹ್ಲಿಯನ್ನೇ ಮೀರಿಸಿದ ರೋಹಿತ್.. T20 ವಿಶ್ವಕಪ್​​ನಲ್ಲಿ ವರ್ಲ್ಡ್​​​ ರೆಕಾರ್ಡ್​ ಮಾಡಿದ ಹಿಟ್​​ಮ್ಯಾನ್

ಕೇರೂರ ಗ್ರಾಮದ ನಿವಾಸಿ ಮಹಾದೇವಿ ಶಿರಗುಪ್ಪಿ (54) ಮೃತ ದುರ್ದೈವಿ. ಗಾಯಾಳು ಮಹಾಂತೇಶ ಶಿರಗುಪ್ಪಿ ಎನ್ನುವರನ್ನ ಚಿಕ್ಕೋಡಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರಿಬ್ಬರು ಕೆಲಸದ ನಿಮಿತ್ತ ಬೈಕ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯ ಚಿಂಚಣಿ ಟೋಲ್ ಬಳಿ ಬೈಕ್ ಮತ್ತು ಟಾಟಾ ಏಸ್ ಮಧ್ಯ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಮೇಲಿದ್ದ ಮಹಿಳೆ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇನ್ನು ಸವಾರನಿಗೆ ಗಂಭೀರವಾದ ಗಾಯಗಳು ಆಗಿವೆ. ಘಟನಾ ಸ್ಥಳಕ್ಕೆ ಚಿಕ್ಕೋಡಿ ಸಂಚಾರಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೈಕ್- ಟಾಟಾ ಏಸ್ ನಡುವೆ ಭೀಕರ ಡಿಕ್ಕಿ.. ಸ್ಥಳದಲ್ಲೇ ಉಸಿರು ಚೆಲ್ಲಿದ ಮಹಿಳೆ

https://newsfirstlive.com/wp-content/uploads/2024/06/BGM_ACCIDENT.jpg

Load More