/newsfirstlive-kannada/media/post_attachments/wp-content/uploads/2024/07/maruti.jpg)
ಚಿಕ್ಕೋಡಿ: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಬೈಕ್ ಸವಾರನೋರ್ವ ಡಿಕ್ಕಿ ಹೊಡೆದ ಘಟನೆ ಹಿರೇಕೋಡಿ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸಾವನ್ನಪ್ಪಿದ ಬೈಕ್​​ ಸವಾರನನ್ನು ಮಾರುತಿ ಬಾಳಪ್ಪ ಮಗದುಮ್ ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಯಕ್ಸಂಬಾ-ಚಿಕ್ಕೋಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಮಾರುತಿ ಬಾಳಪ್ಪ ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ: ಡಿ ಗ್ಯಾಂಗ್​ಗೆ ಭಾರೀ ಸಂಕಷ್ಟ.. ಪೊಲೀಸರ ಬಳಿಯಿದೆ ಮತ್ತೊಂದು ಬಲವಾದ ಸಾಕ್ಷಿ!
ಮಾರುತಿ ಬಾಳಪ್ಪ ಮಗದುಮ್ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ನಿವಾಸಿಯಾಗಿದ್ದಾನೆ. ಅತ್ತ ಲಾರಿ ಚಾಲಕ ಸಂಭಾಜಿ ವರೂಟೆ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us