/newsfirstlive-kannada/media/post_attachments/wp-content/uploads/2024/05/Chikkmagaluru.jpg)
ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಎನ್ ಆರ್ ಪುರ ತಾಲೂಕಿನ ಕರಗುಂದ ಗ್ರಾಮದ ಬಳಿ ನಡೆದಿದೆ. ಸಾವನ್ನಪ್ಪಿದವರನ್ನು ಹೊರನಾಡು ಗ್ರಾಮದ ಉಮೇಶ್, ಮುಂಡಗದ ಮನೆ ಗ್ರಾಮದ ಸುನಿಲ್ ಎಂದು ಗುರುತಿಸಲಾಗಿದೆ.
ಮೂಡಿಗೆರೆ ತಾಲೂಕಿನ ಮುಂಡಗದ ಮನೆ ಗ್ರಾಮದ ಉಮೇಶ್ ಎಂಬವರು ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಹೋಗುತ್ತಿದ್ದರು. ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ಬೈಕ್​ ಅಪಘಾತವಾಗಿದೆ.
/newsfirstlive-kannada/media/post_attachments/wp-content/uploads/2024/05/Bike-Accident-In-chikkamagaluru.jpg)
ಇದನ್ನೂ ಓದಿ:ಬಸ್​ ಏರುವ ಮುನ್ನ ಹೃದಯಾಘಾತ.. ಚುನಾವಣಾ ಸಿಬ್ಬಂದಿ ಕುಸಿದು ಬಿದ್ದು ಸಾವು
ಬೈಕ್​ ಸವಾರರು ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದಾರೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us