ಗಾಯಾಳುಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ
ವೇಗವಾಗಿ ಬಂದ ಕಾರು, ಲಾರಿಗೆ ಡಿಕ್ಕಿ ಹೊಡೆದ ಹಿನ್ನೆಲೆ ಸಾವು
ಕಾರಿನಲ್ಲಿ ಹಟ್ಟಿ ಗ್ರಾಮಕ್ಕೆ ತೆರಳುತ್ತಿರುವಾಗ ನಡೆದ ಅಪಘಾತ
ಕಲಬುರಗಿ: ಬೈಕ್, ಕಾರು ಹಾಗೂ ಲಾರಿ ನಡುವೆ ಭೀಕರವಾದ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ನಡೆದಿದೆ.
ರಾಘವೇಂದ್ರ (35), ಮುಜಾಹಿದ್ (30), ಹುಸೇನ್ ಬಿ (45), ಮೌಲಾಬಿ (50) ಮೃತಪಟ್ಟಿರುವ ದುರ್ದೈವಿಗಳು. ಇನ್ನು ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ: ಕರೆಂಟ್ ಕಂಬಕ್ಕೆ ಎಲೆಕ್ಟ್ರಿಕ್ ಬೈಕ್ ಡಿಕ್ಕಿ.. ಸ್ಥಳದಲ್ಲೇ ಉಸಿರು ಚೆಲ್ಲಿದ ಇಬ್ಬರು ಯುವಕರು
ಸಿಂದಗಿ ಕಡೆಯಿಂದ ಚಿತ್ತಾಪುರ ಕಡೆಗೆ ಹೊರಟಿದ್ದ ಬೈಕ್ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದು ಚಕ್ರಗಳಿಗೆ ಸಿಕ್ಕಿಕೊಂಡಿದೆ. ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರು ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರು ರಾಯಚೂರಿನ ಹಟ್ಟಿ ಗ್ರಾಮಕ್ಕೆ ತೆರಳುತ್ತಿದ್ದರು ಎಂದು ಗೊತ್ತಾಗಿದೆ. ಘಟನೆ ನಡೆದ ಸ್ಥಳಕ್ಕೆ ಕಲಬುರಗಿ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದರು. ಟ್ರಾಫಿಕ್- 1 ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ