/newsfirstlive-kannada/media/post_attachments/wp-content/uploads/2025/07/biklu-shiv.jpg)
ರೌಡಿ ಶೀಟರ್ ಬಿಕ್ಲು ಶಿವನ ಹತ್ಯೆ ಕೇಸ್ನಲ್ಲಿ ಬಿಜೆಪಿ ಶಾಸಕನಗೆ ಬಂಧನ ಭೀತಿ ಶುರುವಾಗಿದೆ. ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಿದೆ. ಬೈರತಿ ಬಸವರಾಜ್ರ ವಿಚಾರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡ್ತಿದ್ದಂತೆ ಹಿರಿಯ ಪೊಲೀಸರು ಅಲರ್ಟ್ ಆಗಿದ್ದು, ತನಿಖಾ ತಂಡದ ಜೊತೆ ರಾತ್ರಿ ದಿಢೀರ್ ಸಭೆ ನಡೆಸಿದ್ದಾರೆ.
ಇದನ್ನೂ ಓದಿ: ಕನ್ನಡದ ಸ್ಟಾರ್ ನಿರೂಪಕಿ ಮದುವೆ.. ಅನುಶ್ರೀ ಆಗ್ತಾ ಇರೋದು ಲವ್..? ಅರೇಂಜ್ ಮ್ಯಾರೇಜ್..?
ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಪ್ರಕರಣ, ಮಾಜಿ ಸಚಿವ ಬೈರತಿ ಬಸವರಾಜ್ಗೆ ಸಂಕಷ್ಟತಂದೊಡ್ಡಿದೆ. ಇದರ ನಡುವೆ ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಬಿಜೆಪಿ ಶಾಸಕನಿಗೆ ಹಿನ್ನಡೆಯಾಗಿದ್ದು, ಪೊಲೀಸರ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರಿಂದ ಮಾಜಿ ಸಚಿವ ಬೈರತಿ ಬಸವರಾಜ್ ಅಡಕತ್ತರಿಗೆ ಸಿಲುಕಿದ್ದು, ಬಂಧನ ಭೀತಿಯಲ್ಲಿದ್ದಾರೆ.
ರೌಡಿಶೀಟರ್ ಶಿವಪ್ರಕಾಶ್ ಪ್ರಕರಣದಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ವಿಚಾರಣೆಗೆ ಹಾಜರಾಗುವಂತೆ ಜಾರಿ ಮಾಡಿದ್ದ ನೋಟಿಸ್ ರದ್ದು ಕೋರಿ ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್, ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಪೀಠ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದೆ. ಅಲ್ಲದೆ ಕಾನೂನು ಪ್ರಕಾರ ತನಿಖೆ ನಡೆಸುವಂತೆ ಹೈಕೋರ್ಟ್ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ. ಅರ್ಜಿದಾರರಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 35(3)ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಅದರಂತೆ ವಿಚಾರಣೆ ನಡೆಸಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೂ ಇಂದು ಬೆಳಗ್ಗೆ 11.30ಕ್ಕೆ ಪೊಲೀಸರ ವಿಚಾರಣೆಗೆ ಹಾಜರಾಗಲು ನಿರ್ದೇಶನವನ್ನು ನೀಡಿದೆ. ಹೀಗಾಗಿ ತನಿಖಾಧಿಕಾರಿ ಕೆಜಿಹಳ್ಳಿ ಎಸಿಪಿ ಪ್ರಕಾಶ್ ರಾಥೋಡ್ ಮುಂದೆ ಹಾಜರಾಗುವ ಅನಿವಾರ್ಯತೆ ಎದುರಾಗಿದೆ.
ಹೈಕೋರ್ಟ್‌ನಿಂದ ಆದೇಶ ಹೊರಬೀಳ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ. ಪುಲಕೇಶಿನಗರ ಠಾಣೆಗೆ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿ ದೇವರಾಜ್, ಎಸಿಪಿ ಗೀತಾ ಠಾಣೆಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ರಾತ್ರೋ ರಾತ್ರಿ ತನಿಖಾ ತಂಡದ ಜೊತೆ ಹಿರಿಯ ಅಧಿಕಾರಿಗಳು ದಿಢೀರ್ ಸಭೆ ಕೂಡ ನಡೆಸಿದ್ದಾರೆ. ಈ ವೇಳೆ ಶಾಸಕ ಬೈರತಿ ಬಸವರಾಜ್ ವಿಚಾರಣೆಗೆ ಸಂಬಂಧ ಕೆಲವೊಂದು ಅಗತ್ಯ ಸಲಹೆ ಸೂಚನೆಗಳನ್ನು ತನಿಖಾಧಿಕಾರಿಗಳಿಗೆ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೊಲೆಯಾದ ಶಿವಪ್ರಕಾಶ್ ಮತ್ತು ಬೈರತಿ ಬಸವರಾಜ್ ನಡುವಿನ ಸಂಬಂಧದ ಬಗ್ಗೆ ಪ್ರಶ್ನಿಸುವ ಸಾಧ್ಯತೆ ಇದೆ. ಸದ್ಯ ಪ್ರಕರಣದಲ್ಲಿ ದೊರೆತಿರುವ ಸಾಕ್ಷ್ಯಗಳನ್ನ ಮುಂದಿಟ್ಟು ಮಾಜಿ ಸಚಿವ ಬೈರತಿ ಬಸವರಾಜ್ ಅವರ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಒಟ್ಟಾರೆಯಾಗಿ ಹೈಕೋರ್ಟ್ ನಿರ್ದೇಶನದಿಂದ ಶಾಸಕ ಬೈರತಿ ಬಸವರಾಜ್ ಅಡಕತ್ತರಿಗೆ ಸಿಲುಕಿತ್ತು. ಇಂದು ಬೆಳಗ್ಗೆ 11.30ಕ್ಕೆ ವಿಚಾರಣೆಗೆ ಹಾಜರಾಗಬೇಕಾದ ಅನಿರ್ವಾಯತೆ ಎದುರಾಗಿದೆ. ಒಂದ್ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಮೂರನೇ ನೋಟಿಸ್ ನಂತರ ಪೊಲೀಸರು ಬಂಧನ ಮಾಡುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ