newsfirstkannada.com

Breaking News: ದೇಶದ ಈ ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆ; ಸಾವಿರ, ಸಾವಿರ ಕೋಳಿಗಳು ಇದ್ದಕ್ಕಿದ್ದಂತೆ ಸಾವು

Share :

Published February 17, 2024 at 8:02am

    ಯಾವ ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ?

    ಹಕ್ಕಿಜ್ವರ ಹಿನ್ನೆಲೆಯಲ್ಲಿ ಕೋಳಿ ಬೆಲೆಯಲ್ಲಿ ಇಳಿಕೆ ಸಾಧ್ಯತೆ

    ಮೂರು ತಿಂಗಳ ಕಾಲ ಅಂಗಡಿ ಬಂದ್​ಗೆ ಜಿಲ್ಲಾಧಿಕಾರಿ ಆದೇಶ

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ‘ಹಕ್ಕಿ ಜ್ವರ’ (bird flu) ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿರುವ ಕೋಳಿಗಳು ಭಾರೀ ಸಂಖ್ಯೆಯಲ್ಲಿ ಸಾವನ್ನಪ್ಪಿವೆ.

ವಟಗುಟ್ಲ, ಗುಮ್ಮಲ್ಲಡಿಬ್ಬ ಪ್ರದೇಶದಲ್ಲಿ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಮಾಹಿತಿ ಸಿಕ್ಕ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದರು. ಪರೀಕ್ಷೆ ಬಳಿಕ ಜ್ವರದಿಂದ ಸಾವನ್ನಪ್ಪಿರೋದು ದೃಢಪಟ್ಟಿದೆ.

ಏಕಾಏಕಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೋಳಿ ಸಾಗಾಟಕ್ಕೆ, ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಾವನ್ನಪ್ಪಿರುವ ಕೋಳಿ ಅಂಗಡಿಗಳನ್ನು ಮುಚ್ಚಿಸಿ, ಎಲ್ಲಿಯೂ ಕೂಡ ಮಾರಾಟ ಮಾಡದಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಕೋಳಿ ಸಾವನ್ನಪ್ಪಿರುವ ಸುತ್ತಮುತ್ತಲಿನ ಪ್ರದೇಶದಲ್ಲಿ ಮೂರು ತಿಂಗಳ ಕಾಲ, ಮಾರಾಟಕ್ಕೆ ನಿಷೇಧ ಹೇರಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking News: ದೇಶದ ಈ ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆ; ಸಾವಿರ, ಸಾವಿರ ಕೋಳಿಗಳು ಇದ್ದಕ್ಕಿದ್ದಂತೆ ಸಾವು

https://newsfirstlive.com/wp-content/uploads/2024/02/BIRD-FLU.jpg

Load More