/newsfirstlive-kannada/media/post_attachments/wp-content/uploads/2024/06/Madhu-bangarappa.jpg)
ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.
ಇದನ್ನೂ ಓದಿ: ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು.. 60 ಜನರು ಅಸ್ವಸ್ಥ.. ಜಿಲ್ಲಾಧಿಕಾರಿ ಸೇರಿ 10 ಮಂದಿ ಅಮಾನತು
ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗ್ತಿಲ್ಲವಲ್ಲ ಅಂತ ಬೇಜಾರು ಮಾಡಿಕೊಳ್ಳುತ್ತವೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ