/newsfirstlive-kannada/media/post_attachments/wp-content/uploads/2024/08/HDK_Vijayendra_1.jpg)
ಬೆಂಗಳೂರು: ಮುಡಾ ಪಾದಯಾತ್ರೆಗೆ ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲೇ ಬಿರುಕು ಉಂಟಾಗಿತ್ತು. ಹಾಗಾಗಿ ರಾಜ್ಯ ಬಿಜೆಪಿ ನಾಯಕರ ನಡೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಹಿರಂಗ ಅಸಮಾಧಾನ ಹೊರಹಾಕಿದ್ದರು. ಈ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಹೈಕಮಾಂಡ್ ನಾಯಕರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿ ಸಂಧಾನ ಮಾಡಿದ್ದಾರೆ.
ಇನ್ನು, ಈ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಷ್ಟ್ರೀಯ ನಾಯಕ ರಾಧಾ ಮೋಹನ್ ದಾಸ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮಾತಾಡಿದರು. ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಹೆಚ್.ಡಿ ಕುಮಾರಸ್ವಾಮಿ ಮತ್ತು ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲೇ ಪಾದಯಾತ್ರೆ ನಡೆಯಲಿದೆ ಎಂದರು.
ಇದೇ ಸಂದರ್ಭದಲ್ಲಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಾಲ್ಮೀಕಿ ನಿಗಮದಲ್ಲಿ ಭಾರೀ ಭ್ರಷ್ಟಾಚಾರ ಆಗಿದೆ. ಸಿಎಂ ಕುಟುಂಬದವರಿಗೆ 14 ಮುಡಾ ಸೈಟ್ಗಳು ಬಂದಿವೆ. ಅಷ್ಟೇ ಅಲ್ಲ ಅಧಿಕಾರಕ್ಕೆ ಬಂದ ಕೂಡಲೇ ತಮ್ಮ ಹಿಂಬಾಲಕರಿಗೆ ಕಾಂಗ್ರೆಸ್ ನಾಯಕರು 4000 ಕೋಟಿ ಮೌಲ್ಯದ ಸೈಟುಗಳು ನೀಡಿದ್ದಾರೆ ಎಂದು ಆರೋಪಿಸಿದ್ರು.
ಕಾಂಗ್ರೆಸ್ ಸರ್ಕಾರದಿಂದ ಬಡವರಿಗೆ ಅನ್ಯಾಯವಾಗಿದೆ. ಸದನದ ಒಳಗೂ ಹೋರಾಟ ಮಾಡಿದ್ದೇವೆ. ಈಗ ಸದನದ ಹೊರಗೂ ಹೋರಾಟ ಮಾಡುತ್ತೇವೆ. ಯಾವುದೇ ಗೊಂದಲ ಇಲ್ಲ. ನೈಸ್ ಜೋಡ್ ಜಂಕ್ಷನ್ನಿಂದ ಮುಡಾ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರೇ ಚಾಲನೆ ನೀಡಲಿದ್ದಾರೆ. ಈ ಪಾದಯಾತ್ರೆಯಲ್ಲಿ ಜೆಡಿಎಸ್, ಬಿಜೆಪಿ ಶಾಸಕ ಮತ್ತು ಸಂಸದರು ಭಾಗಿಯಾಗಲಿದ್ದಾರೆ ಎಂದರು.
ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ.. ರಾಜ್ಯದ 5 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ