newsfirstkannada.com

Surapur by Election: ಸುರಪುರ ವಿಧಾನ ಸಭಾ ಉಪಚುನಾವಣೆಗೆ ಅಭ್ಯರ್ಥಿ ಹೆಸರು ಪ್ರಕಟಿಸಿದ ಬಿಜೆಪಿ..!

Share :

Published March 26, 2024 at 2:24pm

  ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸ್ಥಾನ

  ಉಪ ಚುನಾವಣೆಗೆ ದಿನಾಂಕ ಪ್ರಕಟಿಸಿರುವ ಚುನಾವಣಾ ಆಯೋಗ

  ಸುರಪುರ ಕ್ಷೇತ್ರದ ಮತದಾನ, ಫಲಿತಾಂಶದ ದಿನ ಯಾವುದು?

ಯಾದಗಿರಿ: ಸುರಪುರ ವಿಧಾನಸಭೆಗೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದೆ. ಮಾಜಿ ಶಾಸಕ ರಾಜುಗೌಡ ಅವರಿಗೆ ಟಿಕೆಟ್​ ನೀಡಿದೆ.

ನಿರೀಕ್ಷೆಯಂತೆ ರಾಜುಗೌಡಗೆ ಬೈ-ಎಲೆಕ್ಷನ್ ಟಿಕೆಟ್ ಸಿಕ್ಕಿದ್ದು, ಪ್ರಚಾರದ ಅಖಾಡಕ್ಕೆ ಧುಮುಕಲಿದ್ದಾರೆ. ಕಾಂಗ್ರೆಸ್​ ಶಾಸಕ ರಾಜಾ ವೆಂಕಟಪ್ಪ ನಾಯಕ ಅಕಾಲಿಕ ನಿಧನದಿಂದ ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನ ತೆರವಾಗಿದೆ. ಕಳೆದ ಫೆಬ್ರವರಿ 25ರಂದು ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ.

ಇದನ್ನೂ ಓದಿ: ಸುರಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್​.. ಸ್ಪರ್ಧೆ ಮಾಡೋರು ಇವರೇ..!

ಕಾಂಗ್ರೆಸ್​ನಿಂದ ರಾಜಾ ವೆಂಕಟಪ್ಪ ನಾಯಕ ಅವರ ಹಿರಿಯ ಪುತ್ರ ರಾಜಾ ವೇಣುಗೋಪಾಲ ನಾಯಕ ಅಭ್ಯರ್ಥಿಯಾಗಿದ್ದಾರೆ. ಇತ್ತ ಬಿಜೆಪಿಯಿಂದ ಮಾಜಿ ಶಾಸಕ ರಾಜುಗೌಡ ಅಭ್ಯರ್ಥಿಯಾಗಿದ್ದು, ಜಿದ್ದಾಜಿದ್ದಿನ ಪೈಪೋಟಿ ನಡೆಯಲಿದೆ. ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Surapur by Election: ಸುರಪುರ ವಿಧಾನ ಸಭಾ ಉಪಚುನಾವಣೆಗೆ ಅಭ್ಯರ್ಥಿ ಹೆಸರು ಪ್ರಕಟಿಸಿದ ಬಿಜೆಪಿ..!

https://newsfirstlive.com/wp-content/uploads/2024/03/SURAPURA.jpg

Load More