/newsfirstlive-kannada/media/post_attachments/wp-content/uploads/2024/10/Congress_JDS_BJP.jpg)
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಈಗ ಜಟಿಲಗೊಂಡಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಯಾರಿಗೆ ಟಿಕೆಟ್ ನೀಡಬೇಕು ಎಂದು ಯೋಚನೆಯಲ್ಲಿ ತೊಡಗಿವೆ. ಆಕಾಂಕ್ಷಿಗಳ ಒತ್ತಡದಿಂದ ಇಂಥ ಸನ್ನಿವೇಶವೊಂದು ನಿರ್ಮಾಣವಾಗಿದೆ. ಇದರ ಮಧ್ಯೆಯೂ ಬಿಜೆಪಿ ಎರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ.
ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ. ಶಿಗ್ಗಾವಿಯಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಅವರು ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸಂಡೂರಿನಿಂದ ಜನಾರ್ದನ್ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ.
ಚನ್ನಪಟ್ಟಣ ಬಾಕಿ ಉಳಿಸಿಕೊಂಡಿದ್ದೇಕೆ ಬಿಜೆಪಿ?
ಇನ್ನು, ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಅತ್ತ ಎನ್‌ಡಿಎ ಮೈತ್ರಿಕೂಟದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಟಿಕೆಟ್‌ಗೆ ಸಿ.ಪಿ ಯೋಗೇಶ್ವರ್ ಪ್ರಯತ್ನಿಸಿದ್ರೂ ಈ ಕ್ಷೇತ್ರದಲ್ಲಿ ಜೆಡಿಎಸ್‌ಗೇ ಅವಕಾಶ ಹೆಚ್ಚು ಎನ್ನುವ ಸುದ್ದಿ ಹೊರಬಿದ್ದಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ