BREAKING: ಬಿಜೆಪಿಯ 5ನೇ ಪಟ್ಟಿ ಬಿಡುಗಡೆ; ಬೆಳಗಾವಿ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ ಅಭ್ಯರ್ಥಿ ಘೋಷಣೆ

author-image
admin
Updated On
ಅನಂತ್ ಕುಮಾರ್‌ ಹೆಗಡೆಗೆ ತಪ್ಪಿದ ‘ಲೋಕ’ ಸಮರ, ಮಾಜಿ ಸ್ಪೀಕರ್​ಗೆ ಟಿಕೆಟ್.. ಚಿತ್ರದುರ್ಗ ಇನ್ನೂ ನಿಗೂಢ
Advertisment
  • ಲೋಕಸಭಾ ಚುನಾವಣೆಗೆ ಬಿಜೆಪಿಯ 5ನೇ ಪಟ್ಟಿ ಬಿಡುಗಡೆ
  • ರಾಜ್ಯದ 4 ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಘೋಷಣೆ
  • ಬೆಳಗಾವಿ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ರಾಯಚೂರಿಗೆ ಅಭ್ಯರ್ಥಿ ಯಾರು?

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಕ್ಕೆ 5ನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಬೆಳಗಾವಿ - ಜಗದೀಶ್ ಶೆಟ್ಟರ್
ಉತ್ತರ ಕನ್ನಡ - ವಿಶ್ವೇಶ್ವರ ಹೆಗಡೆ ಕಾಗೇರಿ
ಚಿಕ್ಕಬಳ್ಳಾಪುರ - ಡಾ.ಕೆ. ಸುಧಾಕರ್
ರಾಯಚೂರು - ರಾಜಾ ಅಮರೇಶ್ ನಾಯಕ್

ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಎದುರು ನಿಲ್ಲೋದು ಯಾರು..? ಕುಮಾರಸ್ವಾಮಿ ಸ್ಪರ್ಧೆ ಪಕ್ಕಾನಾ..?

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುವುದು ಬೇಡ ಎಂದು ಸ್ಥಳೀಯ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದರು. ಆದರೂ ಬಿಜೆಪಿ ಹೈಕಮಾಂಡ್ ಜಗದೀಶ್ ಶೆಟ್ಟರ್ ಅವರಿಗೆ ಮಣೆ ಹಾಕಿದೆ. ಇತ್ತೀಚಿಗೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ‌ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ನಿಶ್ಚಿತ ಎಂಬ ಹೇಳಿಕೆ ನೀಡಿದ್ದರು. ಸಂವಿಧಾನ ತಿದ್ದುಪಡಿಯ ಹೇಳಿಕೆ ನೀಡಿದ ಬಳಿಕ ಅನಂತ್‌ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈ ತಪ್ಪಿದೆ. ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮಾಜಿ ಸಚಿವ ಕೆ. ಸುಧಾಕರ್ ಅವರು ಕೊನೆಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ದಿಸಲು ಬಿಜೆಪಿ ಹೈಕಮಾಂಡ್‌ನಿಂದ ಟಿಕೆಟ್ ಪಡೆಿದಿದ್ದಾರೆ. 4 ಲೋಕಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಿಸುವುದರ ಮೂಲಕ ಬಿಜೆಪಿ ರಾಜ್ಯದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ಮಂಡ್ಯ, ಕೋಲಾರ, ಹಾಸನ ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಮೈತ್ರಿ ಒಪ್ಪಂದ ಆಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment