ಶಾಸಕ ಆರ್.ಅಶೋಕ್ ನೇತೃತ್ವದಲ್ಲಿ ರಾಜ್ಯಪಾಲರಿಗೆ ದೂರು
'ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಕಾಂಗ್ರೆಸ್ ಪ್ಲಾನ್'
ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮಾಜಿ ಸಚಿವ ಆರ್.ಅಶೋಕ್
ಬೆಂಗಳೂರು: ಸಚಿವರು, ಬಿಬಿಎಂಪಿ ಅಧಿಕಾರಿಗಳಿದ್ದ ಸಭೆಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಭಾಗಿಯಾಗಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ರಾಜಭವನಕ್ಕೆ ಆಗಮಿಸಿದ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ.
ದೂರು ನೀಡಿದ ಬಳಿಕ ರಾಜಭವನದಲ್ಲಿ ಮಾತನಾಡಿದ ಮಾಜಿ ಸಚಿವ ಆರ್. ಅಶೋಕ್, ಬೆಂಗಳೂರಲ್ಲಿ ಅನೇಕ ಸಂಸರದರು ಇದ್ದಾರೆ. ಇವರಲ್ಲಿ ಯಾರನ್ನು ಸಭೆಗೆ ಕರೆಯದೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಸಭೆಗೆ ಕರೆದಿದೆ. ಇದರಿಂದ ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ಕಚೇರಿ ಮಾಡಲು ಸರ್ಕಾರ ಹೊರಟಿದೆ. ನಮ್ಮ ರಾಜ್ಯವನ್ನು ಎಟಿಎಂ ಮಾಡಿಕೊಳ್ಳಲು ಕಾಂಗ್ರೆಸ್ ಹೊರಟಿದೆ. ಅಧಿಕಾರದ ಮದದಿಂದ ಈ ರೀತಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸಭೆಯಲ್ಲಿ ಸುರ್ಜೇವಾಲ ಅವರು ಕುಳಿತ್ತಿದ್ದರು ಪರವಾಗಿಲ್ಲ. ಆದ್ರೆ ಮೇನ್ ಚೇರ್ನಲ್ಲಿ ಕೂರಿಸಿ ಯಾರು ತಪ್ಪು ಮಾಡಿದ್ದಾರೆ. ಅವರಿಗೆ ಶಿಕ್ಷೆಯಾಗಬೇಕು. ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು ರಾಜ್ಯಪಾಲರು ದೂರನ್ನು ಸ್ವೀಕಾರ ಮಾಡಿದ್ದಾರೆ.
ಮಂತ್ರಿಗಳು ಬಿಬಿಎಂಪಿಯನ್ನು ಕಾಂಗ್ರೆಸ್ ಆಫೀಸ್ ಮಾಡಲು ಹೊರಟಿದ್ದಾರೆ. ರಾಜ್ಯಕ್ಕೆ ಸಂಬಂಧಿಸದ ವ್ಯಕ್ತಿಯೊಬ್ರು ಸಭೆಯಲ್ಲಿ ಭಾಗವಹಿಸಿ, ಬೆಂಗಳೂರು ಅಭಿವೃದ್ಧಿ, ಬಿಬಿಎಂಪಿ ಚುನಾವಣೆ, ವಾರ್ಡ್ ವಿಂಗಡಣೆ ಬಗ್ಗೆ ಚರ್ಚೆ ಮಾಡಿದ್ರೆ, ಸಂಸದರು, ರಾಜ್ಯಸಭೆ ಸದಸ್ಯರು ಎಲ್ಲಿಗೆ ಹೋಗಬೇಕು. ಈ ಬಗ್ಗೆ ಸೂಕ್ತ ತನಿಖೆ ಮಾಡಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಪೂರಕವಾದ ದಾಖಲೆಗಳನ್ನು ನೀಡಿದ್ದೇವೆ. ಸುಮ್ಮನೆ ಅವರು ಬಂದು ಹೋಗೋಕೆ ನಾಟಕದ ಕಂಪನಿನಾ ಎಂದು ಆರ್ ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಇದೇ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಗುಡುಗಿದ ಆರ್ ಅಶೋಕ್, ಶಿವಕುಮಾರ್ ಒಬ್ಬರಿಗೇನಾ ತಲೆ ಇರೋದು, ಅವರೋಬ್ಬ ಪಕ್ಕಾ ಬ್ಯುಸಿನೆಸ್ ಮ್ಯಾನ್. ಕೊಟ್ಟಂಗೂ ಆಗಬೇಕು, ಕಿತ್ತುಕೊಂಡಂಗೂ ಆಗಬೇಕು. 2000 ರೂಪಾಯಿ ಕೊಟ್ಟು, ಅದಕ್ಕಿಂತ ಹೆಚ್ಚು ವಸೂಲಿ ಮಾಡುತ್ತಾರೆ. ರಾಜ್ಯದಲ್ಲಿ ತರಕಾರಿ, ದವಸ, ಧಾನ್ಯದ ದರ ಹೆಚ್ಚಳ ಮಾಡ್ತಾರೆ ಎಂದು ಹೇಳಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ