ಲೋಕಸಭಾ ಚುನಾವಣೆ ಎದುರಿಸಲು BJP ಮೇಜರ್ ಸರ್ಜರಿ
ಜೆ.ಪಿ ನಡ್ಡಾ, ಅಮಿತ್ ಶಾ, ಬಿ.ಎಲ್ ಸಂತೋಷ್ ರಹಸ್ಯ ಸಭೆ
ಜಾರ್ಖಂಡ್, ತೆಲಂಗಾಣ, ಆಂಧ್ರ, ಪಂಜಾಬ್‌ಗೆ ನೂತನ ಸಾರಥಿ
ನವದೆಹಲಿ: ಮುಂದಿನ ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿರೋ ಬಿಜೆಪಿ ರಾಷ್ಟ್ರೀಯ ನಾಯಕರು ಇವತ್ತು ಮೇಜರ್ ಸರ್ಜರಿ ಮಾಡಿದ್ದಾರೆ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ 4 ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನ ನೇಮಿಸಲಾಗಿದೆ. ಹೊಸ ಸಾರಥ್ಯದಲ್ಲಿ ಮುಂಬರುವ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಲು ಮಾಸ್ಟರ್ ಪ್ಲಾನ್ ಮಾಡಿದೆ.
ಕೇಂದ್ರ ಸಚಿವ ಸಂಪುಟದ ಪುನಾರಚನೆ ಹಾಗೂ ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಮಹತ್ವದ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭಾಗಿಯಾಗಿದ್ದರು. ಈ ತ್ರಿಮೂರ್ತಿಗಳ ಸಭೆಯಲ್ಲಿ ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ಇಂದು 4 ರಾಜ್ಯಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಿದ್ದಾರೆ. 4 ರಾಜ್ಯಗಳ ನೂತನ ರಾಜ್ಯಾಧ್ಯಕ್ಷರ ಪಟ್ಟಿ ಇಲ್ಲಿದೆ.
ಜಾರ್ಖಂಡ್, ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್ ಜೊತೆಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುವ ನಿರೀಕ್ಷೆ ಇತ್ತು. ಆದರೆ ಬಿಜೆಪಿ ರಾಷ್ಟ್ರೀಯ ನಾಯಕರು ಸದ್ಯಕ್ಕೆ 5 ರಾಜ್ಯದ ಬದಲು 4 ರಾಜ್ಯಕ್ಕಷ್ಟೇ ಅಧ್ಯಕ್ಷರ ಬದಲಾವಣೆ ಮಾಡಿದ್ದಾರೆ. ಕರ್ನಾಟಕ ಬಿಜೆಪಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಬದಲಾವಣೆಗೂ ಆಗ್ರಹ ಕೇಳಿ ಬಂದಿದ್ದು, ಶೀಘ್ರವೇ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ನೂತನ ರಾಜ್ಯಾಧ್ಯಕ್ಷರ ರೇಸ್‌ನಲ್ಲಿ ಸಿ.ಟಿ ರವಿ, ಆರ್. ಅಶೋಕ್, ಡಾ.ಸಿ.ಎನ್ ಅಶ್ವತ್ಥ್ ನಾರಾಯಣ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವರ ಹೆಸರು ಕೇಳಿ ಬಂದಿದೆ.
ರೇಸ್‌ನಲ್ಲಿರುವ ಪ್ರಮುಖ ನಾಯಕರಲ್ಲಿ ಬಿಜೆಪಿ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಅನ್ನೋದು ಕುತೂಹಲ ಕೆರಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ