ನಾಳೆ ಸಿ.ಟಿ ರವಿ ಅವರಿಗೆ ಬಿಜೆಪಿ ಹೈಕಮಾಂಡ್ ಸಿಹಿ ಸುದ್ದಿ ಕೊಡುತ್ತಾ?
ರಾಜ್ಯಾಧ್ಯಕ್ಷ ಸ್ಥಾನ ದೊಡ್ಡ ಜವಾಬ್ದಾರಿ ಅದನ್ನು ಕೇಳಿ ಪಡೆಯಲು ಆಗಲ್ಲ
ರಾಜ್ಯಾಧ್ಯಕ್ಷ ಆಗ್ತಾರೆ ಎಂಬ H.D ದೇವೇಗೌಡರ ಹೇಳಿಕೆ ನಿಜವಾಗುತ್ತಾ?
ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಸಾರಥಿ ಯಾರಾಗ್ತಾರೆ. ಈ ಕುತೂಹಲದ ಪ್ರಶ್ನೆಗೆ ಉತ್ತರ ಸಿಗೋ ಕಾಲ ಹತ್ತಿರವಾದಂತೆ ಕಾಣುತ್ತಿದೆ. ನಾಳೆ ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಬುಲಾವ್ ಕೊಟ್ಟಿದ್ದು, ಸಿ.ಟಿ ರವಿ ಅವರ ನಾಳಿನ ದೆಹಲಿ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಬಗ್ಗೆ ಮಾತನಾಡಿರುವ ಸಿ.ಟಿ ರವಿ ಅವರು, ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ನಾನು ಈಗ ಮಾಜಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ರಾಜ್ಯಾಧ್ಯಕ್ಷ ಸ್ಥಾನ ಅನ್ನೋದು ಒಂದು ದೊಡ್ಡ ಜವಾಬ್ದಾರಿ. ಅದನ್ನು ಕೇಳಿ ಪಡೆಯಲು ಆಗಲ್ಲ ಎಂದು ಹೇಳಿದ್ದಾರೆ.
ನಿನ್ನೆಯಷ್ಟೇ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಮೇಜರ್ ಸರ್ಜರಿ ಮಾಡಿದ್ರು. ಈ ವೇಳೆ ಸಿ.ಟಿ ರವಿ ಅವರನ್ನು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈ ಬಿಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಯಾವ ಹುದ್ದೆಯೂ ಶಾಶ್ವತ ಅಲ್ಲ. ಬಿಜೆಪಿ ರಾಷ್ಟ್ರೀಯ ನಾಯಕರು ಹಲವು ಹುದ್ದೆಗಳಲ್ಲಿ ಸ್ಥಾನ ಕೊಟ್ಟಿದ್ದಾರೆ. ನಾನು ಆಗಲೂ ಈಗಲೂ ಯಾವಾಗಲೂ ಕಾರ್ಯಕರ್ತ. ಈಗಲೂ ಅದೇ ಸೇವಾಭಾವದಿಂದ ಕೆಲಸ ಮಾಡ್ತೀನಿ. ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ವರಿಷ್ಠರು ಯಾವ ಜವಾವ್ದಾರಿ ಕೊಟ್ರೂ ನಿಭಾಯಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: BREAKING: ‘ಬಿಜೆಪಿ ರಾಜ್ಯಾಧ್ಯಕ್ಷ ಸಿ.ಟಿ ರವಿ, ವಿಪಕ್ಷ ನಾಯಕ ಬಸನಗೌಡ ಪಾಟೀಲ್ ಯತ್ನಾಳ್’- ಹೆಚ್.ಡಿ ದೇವೇಗೌಡ
ಸಿ.ಟಿ. ರವಿ ಅವರು ರಾಜ್ಯಾಧ್ಯಕ್ಷ ಆಗ್ತಾರೆ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ದೇವೇಗೌಡರು ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿಗಳು. ಅವರು ಯಾವ ಮಾಹಿತಿ ಇಟ್ಟು ಕೊಂಡು ಹೀಗೆ ಹೇಳಿದ್ರೋ ಗೊತ್ತಿಲ್ಲ. ರಾಜ್ಯಾಧ್ಯಕ್ಷರನ್ನ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು, ಯಾವಾಗ ಕೊಡಬೇಕು ಅಂತಾ ದೊಡ್ಡವರು ನಿರ್ಧಾರ ಮಾಡ್ತಾರೆ. ನಾಳೆ ದೆಹಲಿಯಲ್ಲಿ ನನ್ನ ಕಚೇರಿ ಖಾಲಿ ಮಾಡಬೇಕು. ಹೀಗಾಗಿ ದೆಹಲಿಗೆ ಹೋಗ್ತಾ ಇದ್ದೇನೆ ಎಂದು ಸಿ.ಟಿ ರವಿ ಸ್ಪಷ್ಟಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ