/newsfirstlive-kannada/media/post_attachments/wp-content/uploads/2023/11/HC_BALAKRISHANA.jpg)
ರಾಮನಗರ: ಬಿಜೆಪಿಯವರು ಒಂಥರಾ ಬ್ರಿಟಿಷರು ಇದ್ದ ಹಾಗೆ. ಅವರು ಯಾರು ಪ್ರಬಲರಾಗಿರುತ್ತಾರೋ ಅವರ ಮಧ್ಯೆ ಗುಂಪು ಕಟ್ಟಿ ಎತ್ತಿಕಟ್ಟಿ ಒಡೆದಾಳುವಂತೆ ಮಾಡುತ್ತಾರೆ ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
ಮಾಗಡಿ ತಾಲೂಕಿನ ತೂಬಿನಕೆರೆ ಗ್ರಾಮದ ಕಾರ್ಯಕ್ರಮದಲ್ಲಿ ಮಾತನಾಡಿದ ಎಂಎಲ್​ಎ ಹೆಚ್.ಸಿ ಬಾಲಕೃಷ್ಣ ಅವರು, ಯಾರು ಪ್ರಬಲವಾಗಿರುತ್ತಾರೆ ಅವರ ಮಧ್ಯೆ ಗುಂಪು ಕಟ್ಟಿ ಎತ್ತಿಕಟ್ಟಿ ಒಡೆದಾಳೋ ನೀತಿಯನ್ನು ಬಿಜೆಪಿ ನಾಯಕರು ಅನುಸರಿಸುತ್ತಿದ್ದಾರೆ. ಉತ್ತರ ಪ್ರದೇಶದ ಬಿಎಸ್‍ಪಿ ರೀತಿ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವನ್ನು ಅವರು ಮಾಡದಿದ್ದರೆ ನಾನು ನನ್ನ ಹೆಸರನ್ನು ಬದಲಿಸಿಕೊಳ್ಳುತ್ತೇನೆ ಎಂದು ಚಾಲೆಂಜ್ ಹಾಕಿದ್ದಾರೆ.
[caption id="attachment_26396" align="aligncenter" width="800"]
ಎಂಎಲ್​ಎ ಹೆಚ್.ಸಿ ಬಾಲಕೃಷ್ಣ ಹಾಗೂ ಮಾಜಿ ಸಿಎಂ ಹೆಚ್​​ಡಿಕೆ[/caption]
ಈಗಲೇ ಜೆಡಿಎಸ್ ನಾಯಕರು ಎಚ್ಚೆತ್ತುಕೊಳ್ಳದಿದ್ದರೆ ಅವರ ಅಸ್ಥಿತ್ವವನ್ನು ಸಂಪೂರ್ಣ ಮುಗಿಸುವ ಕೀರ್ತಿ ಬಿಜೆಪಿಯವರಿಗೆ ಸಲ್ಲುತ್ತದೆ. ಮಾಯಾವತಿ ಮುಂದಿನ ಪ್ರಧಾನಿ ಎಂಬಂತೆ ಹೊರಹೊಮ್ಮಿದ್ದರು. ಅಂತಹವರನ್ನೇ ಉತ್ತರ ಪ್ರದೇಶದಲ್ಲಿ ಹೆಸರಿಲ್ಲದಂತೆ ಬಿಜೆಪಿ ಮಾಡಿ, ಅಧಿಕಾರ ಮಾಡುತ್ತಿದ್ದಾರೆ. ಇನ್ನೂ ಕರ್ನಾಟಕದ ಕುಮಾರಣ್ಣ ಯಾವ ಲೆಕ್ಕ. ಕುಮಾರಣ್ಣನಿಗೆ ನಾವೇ ಕಾಣುತ್ತೇವೆ. ನಮ್ಮನ್ನು ನೋಡಿದ ತಕ್ಷಣ ಬಿಜೆಪಿಯವರನ್ನ ತಬ್ಬಿಕೊಳ್ಳುತ್ತಾರೆ. ಅನೇಕ ವರ್ಷಗಳಿಂದ ನಾವು ಜಾತ್ಯಾತೀತ ಎಂದು ಹೇಳಿ ಮಾಜಿ ಪ್ರಧಾನಿ ದೇವೇಗೌಡರನ್ನು ಇಳಿವಯಸ್ಸಿನಲ್ಲಿ ಕೋಮುವಾದಿ ಮಾಡಿಬಿಟ್ಟರು ಎಂದು ಶಾಸಕರು ಆರೋಪ ಮಾಡಿದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us