ಸುಮಲತಾ ಬೆಂಗಳೂರಿನ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರಾ?
ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ MP ಸುಮಲತಾರವರಿಗೆ ಸಂಕಷ್ಟ
ರಾಜ್ಯ ರಾಜಕೀಯ ವಲಯದಲ್ಲಿ BJP-ಜೆಡಿಎಸ್ ಮೈತ್ರಿ ಹೊಸ ಚರ್ಚೆಗೆ ನಾಂದಿ
ಮಂಡ್ಯ: ಬಿಜೆಪಿ-ಜೆಡಿಎಸ್ ನಡುವೆ ದೊಡ್ಡ ರಾಜಕೀಯ ಬೆಳವಣಿಗೆ ದೆಹಲಿಯಲ್ಲಿ ನಡೆದಿದೆ. ಮುಂಬರುವ ಲೋಕಸಭಾ ಚುನಾವಣೆಗೆ 2 ಪಕ್ಷ ಸೇರಿ ಕಾಂಗ್ರೆಸ್ ಅನ್ನು ಕಟ್ಟಿ ಹಾಕಲು ಬಿಗ್ ಪ್ಲಾನ್ ಮಾಡಿವೆ. ಪ್ರಧಾನಿ ಮೋದಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಮಧ್ಯೆ ನಡೆದಿರುವ ಮಾತುಕತೆಯಲ್ಲಿ ಮೈತ್ರಿ ಖಚಿತ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ ಎನ್ನಲಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಮಾಡುತ್ತೆ ಎಂದು ಹೇಳಲಾಗುತ್ತದೆ. ಹೀಗಾಗಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರಿಂದ ಸಂಸದೆ ಸುಮಲತಾ ಅವರ ಮುಂದಿನ ನಡೆಯೇನು ಎಂಬುದು ಸದ್ಯಕ್ಕೆ ಕುತೂಹಲ ಮೂಡಿಸಿದೆ. ಸ್ವಾಭಿಮಾನದ ಹೆಸರಲ್ಲಿ ಕಳೆದ ಎಲೆಕ್ಷನ್ ಅಲ್ಲಿ ಗೆದ್ದಿದ್ದ ಸುಮಲತಾ ಅವರ ಮುಂದಿನ ರಾಜಕೀಯ ಭವಿಷ್ಯದ ಮೇಲೆ ಕರಿ ನೆರಳು ಬಿದ್ದಂತಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ದೋಸ್ತಿ ಮಾಡಿಕೊಂಡ ಕ್ಷೇತ್ರಗಳು ಯಾವುವು?; ಈ ಮೈತ್ರಿಯ ಅಸಲಿ ಟಾರ್ಗೆಟ್ ಏನು?
ದೆಹಲಿಯಲ್ಲಿ ಬಿಜೆಪಿ ನಾಯಕರ ಜೊತೆ ಮಾತನಾಡಿರುವ ಮಾಜಿ ಪ್ರಧಾನಿ ದೇವೇಗೌಡ ಅವರು ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿದೆ. ಈ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಹೋಗಿದೆ. ಇದರಿಂದ ಈ ಬಾರಿ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾ ಅವರಿಗೆ ಟೆನ್ಷನ್ ಶುರುವಾಗಿದ್ದು ಮಂಡ್ಯದಲ್ಲಿ ಪಕ್ಷೇತರವಾಗಿ ಕಣಕ್ಕಿಳಿಯುತ್ತಾರಾ, ಬಿಜೆಪಿ ಸೂಚಿಸಿದಂತೆ ಮತ್ತೊಂದು ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಎನ್ನುವ ಪ್ರಶ್ನೆಗಳು ಸದ್ಯಕ್ಕೆ ಕುತೂಹಲಕ್ಕೆ ಕಾರಣವಾಗಿವೆ.
ಈ ಬಗ್ಗೆ ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್ ಅವರು ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿಯಿಂದ ಅಧಿಕೃತವಾಗಿ ಮಾಹಿತಿ ಬರಬೇಕು. ಕ್ಷೇತ್ರ ಹಂಚಿಕೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅಧಿಕೃತವಾಗಿ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಮಾತನಾಡಲಿ. ನಾನು ಈ ಸಮಯದಲ್ಲಿ ಯಾವುದೇ ಮಾತನಾಡಲ್ಲ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ