newsfirstkannada.com

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೇಲೆ ಸಿ.ಟಿ ರವಿ ಅಸಮಾಧಾನ; ಹೇಳಿದ್ದೇನು?

Share :

11-11-2023

    ಈಗಾಗಲೇ ಬಹಳ‌ ವಿಷಯ ಮಾತನಾಡಿ ಬಿಟ್ಟಿದ್ದೇನೆ ಎಂದ ಸಿ.ಟಿ ರವಿ

    ಏನಾದ್ರು ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತೆ

    ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲಿಸೋ ಜವಾಬ್ದಾರಿ ಇದೆ

ಬೆಂಗಳೂರು: ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಆಯ್ಕೆಯಿಂದ ರಾಜ್ಯ ಬಿಜೆಪಿಯಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಶುಭಾಶಯ, ಬೆಂಬಲಿಗರ ಸಂಭ್ರಮದ ಮಧ್ಯೆ ವಿಜಯೇಂದ್ರ ಅವರಿಗೆ ಮೊದಲ ದಿನವೇ ಅಸಮಾಧಾನದ ಬಿಸಿಯೂ ತಟ್ಟಿದೆ. ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಟಿ ರವಿ ಅವರು ವಿಜಯೇಂದ್ರ ಆಯ್ಕೆ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿ.ಟಿ ರವಿ ಅವರು ಮಾತನಾಡಿದರು. ವಿಜಯೇಂದ್ರ ಅವರನ್ನ ಪಕ್ಷ ನೇಮಕ ಮಾಡಿದೆ. ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟುವ ಬೆಳೆಸುವ ಕೆಲಸವನ್ನು ಅವರು ಮಾಡಬೇಕಿದೆ. ಪ್ರಮುಖವಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಅವರ ಮೇಲಿದೆ ಯಶಸ್ವಿಯಾಗಲಿ ಎಂದಿದ್ದಾರೆ.

ಇದನ್ನೂ ಓದಿ: ಪಟ್ಟಾಭಿಷೇಕ ಆಗ್ತಿದ್ದಂತೆ ಅಖಾಡಕ್ಕಿಳಿದ ಬಿ.ವೈ ವಿಜಯೇಂದ್ರ; ನೂತನ ರಾಜ್ಯಾಧ್ಯಕ್ಷರ ಪ್ಲಾನ್ ಏನು?

ಪರೋಕ್ಷವಾಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಸಿಟಿ ರವಿ ಅವರು ಬದಲಾಗದೆ ಇರೋದು ಕಾರ್ಯಕರ್ತ ಅನ್ನೋದು. ಈಗ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಅಸಮಾಧಾನದ ಬಗ್ಗೆ ಈಗ ನಾನು ಏನು ಮಾತನಾಡಲ್ಲ. ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿವರೆಗೂ ಜವಾಬ್ದಾರಿ ನಿರ್ವಹಿಸಿದ್ದೀನಿ. ಈಗಾಗಲೇ ಬಹಳ‌ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದ್ರು ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತೆ ಎಂದಷ್ಟೇ ಹೇಳಿ ಹೊರಟಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೇಲೆ ಸಿ.ಟಿ ರವಿ ಅಸಮಾಧಾನ; ಹೇಳಿದ್ದೇನು?

https://newsfirstlive.com/wp-content/uploads/2023/11/By-Vijayendra-CT-Ravi.jpg

Load More