newsfirstkannada.com

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ವೇಳೆ ಹೃದಯಾಘಾತ.. ಬಿಜೆಪಿ ನಾಯಕ ಭಾನುಪ್ರಕಾಶ್ ನಿಧನ

Share :

Published June 17, 2024 at 2:52pm

  ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವಾಗ ಘಟನೆ

  ಬೈಕ್ ಅಣಕು ಪ್ರದರ್ಶನದಲ್ಲೂ ಭಾಗಿಯಾಗಿದ್ದ ಭಾನುಪ್ರಕಾಶ್

  ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ ಕೆಲವೇ ಕ್ಷಣದಲ್ಲಿ ನಿಧನ

ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಎಂಎಲ್​ಸಿ ಎಂಬಿ ಭಾನುಪ್ರಕಾಶ್ (70) ಅವರು ಹಠಾತ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ವಾಪಸ್ ಆಗ್ತಿದ್ದಾಗ  ಈ ನೋವಿನ ಘಟನೆ ನಡೆದಿದೆ.

ಇದನ್ನೂ ಓದಿ: ಮಾನವೀಯತೆ ಮೆರೆದ ಡಾ.CN ಮಂಜುನಾಥ್.. ನೂತನ ಸಂಸದರ ಕಾರ್ಯಕ್ಕೆ ಭಾರೀ ಮೆಚ್ಚುಗೆ

ಪೆಟ್ರೋಲ್, ಡೀಸೆಲ್ ಬೆಲೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ಅದರಂತೆ ಶಿವಮೊಗ್ಗದಲ್ಲೂ ಬಿಜೆಪಿ ಮುಖಂಡರೆಲ್ಲ ಸೇರಿ ಪ್ರತಿಭಟನೆ ಮಾಡುತ್ತಿದ್ದರು. ಇದರಲ್ಲಿ ಎಂ.ಬಿ.ಭಾನುಪ್ರಕಾಶ್ ಅವರು ಬೈಕ್ ಅಣಕು ಪ್ರದರ್ಶನದಲ್ಲೂ ಭಾಗಿಯಾಗಿದ್ದರು. ಪ್ರತಿಭಟನೆ ಮುಗಿದ ಮೇಲೆ ಪಕ್ಷದ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಅವರಿಗೆ ಎದೆಯಲ್ಲಿ ನೋವು​ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದಾಖಲು ಮಾಡಿದ ಕೆಲವೇ ಕ್ಷಣದಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಭೀಕರ ರೈಲು ದುರಂತದಲ್ಲಿ ಉಸಿರು ಚೆಲ್ಲಿದ 5 ಪ್ರಯಾಣಿಕರು.. 25 ಮಂದಿ ಗಂಭೀರ; ಸಾವಿನ ಸಂಖ್ಯೆ ಹೆಚ್ಚಾಗೋ ಸಾಧ್ಯತೆ

ಭಾನುಪ್ರಕಾಶ್ ಅವರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನಂತರ 2013 ರಿಂದ 2019ರ ತನಕ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿಯ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಅವರು ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದರು. ಸಂಘ ಪರಿವಾರದಿಂದ ಬಂದ ಹಿನ್ನೆಲೆಯಿಂದ ಭಾನುಪ್ರಕಾಶ್ ಪ್ರಸ್ತುತ 4 ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ವೇಳೆ ಹೃದಯಾಘಾತ.. ಬಿಜೆಪಿ ನಾಯಕ ಭಾನುಪ್ರಕಾಶ್ ನಿಧನ

https://newsfirstlive.com/wp-content/uploads/2024/06/BJP_BHANUPRAKASH.jpg

Load More