ಉಡುಪಿಯಲ್ಲಿ ಅಣ್ಣಾಮಲೈ ಮಾತು.. ಬಿಜೆಪಿ ರಾಜ್ಯಾಧ್ಯಕ್ಷ ವಿಚಾರದ ಬಗ್ಗೆ ಖಡಕ್ ಹೇಳಿಕೆ..!

author-image
Ganesh
Updated On
ಉಡುಪಿಯಲ್ಲಿ ಅಣ್ಣಾಮಲೈ ಮಾತು.. ಬಿಜೆಪಿ ರಾಜ್ಯಾಧ್ಯಕ್ಷ ವಿಚಾರದ ಬಗ್ಗೆ ಖಡಕ್ ಹೇಳಿಕೆ..!
Advertisment
  • ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
  • ಮುಂದಿನ ಕೆಲಸ ಕಾರ್ಯಗಳ ಬಗ್ಗೆ ಏನಂದ್ರು ಅಣ್ಣಾಮಲೈ?
  • ತಾಳ್ಮೆಯಿಂದ ಕಾದಿದ್ದೇವೆ, ಕಾಯುತ್ತೇವೆ ಎಂದಿದ್ದೇಕೆ ಅಣ್ಣಾಮಲೈ?

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ವಿಚಾರವಾಗಿ ಉಡುಪಿಯಲ್ಲಿ ಬಿಜೆಪಿ ನಾಯಕ ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ. ನಾನೊಬ್ಬ ಕಾರ್ಯಕರ್ತ, ಪಕ್ಷ ಒಂದು ಜವಾಬ್ದಾರಿ ಕೊಟ್ಟಿತ್ತು. ಇನ್ನೊಂದು ಜವಾಬ್ದಾರಿ ಕೊಟ್ಟರೂ ಕಾರ್ಯಕರ್ತನಾಗಿ ಕೆಲಸ ಮಾಡ್ತೇನೆ ಎಂದಿದ್ದಾರೆ.

ನಾನು ಎಲ್ಲಿ ಇರಬೇಕು, ಯಾವ ಪೊಸಿಷನ್ನಲ್ಲಿರಬೇಕು ಅಂತ ಪಕ್ಷಕ್ಕೆ ಗೊತ್ತಿದೆ. ಏನೇ ತೀರ್ಮಾನ ತೆಗೆದುಕೊಂಡರೂ ನಾನೊಬ್ಬ ಕಾರ್ಯಕರ್ತ. ತಮಿಳುನಾಡಿನಲ್ಲಿ ಬದಲಾವಣೆ ಆಗಲಿದೆ. ಪಕ್ಷಕ್ಕೆ ಇನ್ನೊಂದು ಅವಕಾಶ ಸಿಗಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಾಯಿ ಸುದರ್ಶನ್ ಬ್ಯಾಟಿಂಗ್ ಆರ್ಭಟ.. ಮುಂದುವರೆದ ಗಿಲ್​ ಸೇನೆಯ ಗುಜರಾತ್ ಗೆಲುವಿನ ಓಟ

ಕೆಲಸ ಮಾಡುವುದು ಮಾತ್ರ ನನ್ನ ಕರ್ಮ, ಏನೇ ಅವಕಾಶಕೊಟ್ಟರೂ ಕೆಲಸ ಮಾಡುತ್ತೇನೆ. ತಮಿಳುನಾಡಿನಲ್ಲಿ ಚುನಾವಣೆ ಬರುತ್ತಿದೆ. ಕೇಂದ್ರ ಗೃಹ ಮಂತ್ರಿ ತಮಿಳುನಾಡು ವಿಪಕ್ಷ ನಾಯಕ ಪಳನಿ ಸ್ವಾಮಿಯನ್ನು ಭೇಟಿಯಾಗಿದ್ದಾರೆ. ಗೃಹ ಸಚಿವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಎಐಡಿಎಂಕೆ ಕುರಿತ ನನ್ನ ನಿಲುವು ಎಲ್ಲರಿಗೂ ಗೊತ್ತು. ಡಿಎಂಕೆಯನ್ನು ಅಧಿಕಾರದಿಂದ ಇಳಿಸುವುದು ಎಲ್ಲರ ಉದ್ದೇಶ. ಎಐಡಿಎಂಕೆ ಬಹಳ ದೊಡ್ಡ ದ್ರಾವಿಡಿಯನ್ ಪಕ್ಷ ಎಂದರು.

ಬಹಳ ವರ್ಷದಿಂದ ನಾವು ತಾಳ್ಮೆಯಿಂದ ಕಾದಿದ್ದೇವೆ, ಕಾಯುತ್ತೇವೆ. ಇನ್ನೂ 20, 30 ವರ್ಷ ಬೇಕಾದರೂ ಆಗಲಿ, ಅಧಿಕಾರಕ್ಕೆ ಬರುತ್ತೇವೆ. ಪಕ್ಷದ ನಿರ್ಧಾರಕ್ಕೆ ಕಾರ್ಯಕರ್ತರಾಗಿ ಒಪ್ಪಿಗೆ ಕೊಡಬೇಕು. ಪಕ್ಷ ರಾಷ್ಟ್ರೀಯ ಮಟ್ಟದಿಂದ ಆಲೋಚನೆ ಮಾಡುತ್ತದೆ. ಡಿಎಂಕೆ ಎಷ್ಟು ಗಲೀಜಾಗಿ ಸರ್ಕಾರ ನಡೆಸ್ತಿದೆ ಅಂತಾ ಎಲ್ಲರಿಗೂ ಗೊತ್ತು. 13 ಸಚಿವರ ಮೇಲೆ ಭ್ರಷ್ಟಾಚಾರ ಪ್ರಕರಣ ನ್ಯಾಯಾಲಯದಲ್ಲಿದೆ. ಒಬ್ಬ ಮಂತ್ರಿ ಒಂದುವರೆ ವರ್ಷ ಜೈಲಿನಲ್ಲಿದ್ದು ಮತ್ತೆ ಮಂತ್ರಿಯಾಗಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಬಜೆಟ್​ನಲ್ಲಿ ಪ್ರಸ್ತಾಪ, ಆದ್ರೆ ನೋ ಯೂಸ್​.. ಅಜಿತ್ ನಟನೆಯ ಗುಡ್‌ ಬ್ಯಾಡ್ ಅಗ್ಲಿ ತುಂಬಾ ಕಾಸ್ಟ್ಲಿ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment