ರಾಜ್ಯ ಬಿಜೆಪಿಯಲ್ಲಿ ಹೆಚ್ಚಾಗುತ್ತಿದೆ ಭಾರೀ ಭಿನ್ನಾಭಿಪ್ರಾಯ
ಸ್ವಪಕ್ಷೀಯ ನಾಯಕರ ವಿರುದ್ಧವೇ ಕೆಲವರಿಂದ ಗಂಭೀರ ಆರೋಪ
ಲೋಕಸಭೆ ಚುನಾವಣೆ ತಯಾರಿ ನಡೆಸ್ತಿದ್ದಾರಾ ರೇಣುಕಾಚಾರ್ಯ?
ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ತುರ್ತು ಸುದ್ದಿಗೋಷ್ಠಿ ನಡೆಸಿ.. ‘ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದೇ ಪಕ್ಷಕ್ಕೆ ದೊಡ್ಡ ಹೊಡೆತ ಆಗಿದೆ’ ಅಂತಾ ಅಸಮಾಧಾನ ಹೊರ ಹಾಕಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಬೆನ್ನಲ್ಲೆ ಬಿಜೆಪಿ ಒಂದೊಂದೇ ನಾಯಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಈ ಮೂಲಕ ಬಿಜೆಪಿಯಲ್ಲಿ ಅಂತರ್ಯುದ್ಧ ಶುರುವಾಗಿದೆ. ಅದರಂತೆ ಇವತ್ತಿನ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ರೇಣುಕಾಚಾರ್ಯ, ಈ ಹಿಂದೆ ನಾನು ಒಳ ಮೀಸಲಾತಿ ಕೊಡಬೇಡಿ ಎಂದು ಹೇಳಿದ್ದೆ. ಚುನಾವಣಾ ಹೊತ್ತಲ್ಲಿ ಜಾರಿ ಮಾಡಿದ್ದು, ಪಕ್ಷಕ್ಕೆ ಭಾರೀ ಪೆಟ್ಟು ಕೊಟ್ಟಿದೆ ಎಂದು ಹರಿಹಾಯ್ದರು.
ಕೇಂದ್ರ ಸರ್ಕಾರದ ಅಕ್ಕಿ ಕೊಡೋದನ್ನು ನಿಲ್ಲಿಸಬೇಡಿ ಅಂತ ಹೇಳಿದ್ದೆ. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ದೊಡ್ಡ ಹೊಡೆತ. ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಾಗಿರಲಿಲ್ಲ. ಅವರು ಎಲ್ಲಾ ಸಮುದಾಯದ ನಾಯಕರಾಗಿದ್ದರು. ಈಶ್ವರಪ್ಪ, ಜಗದೀಶ್ ಶೆಟ್ಟರ್ಗೆ ಟಿಕೆಟ್ ತಪ್ಪಿದ್ದರಿಂದ ಚುನಾವಣೆಯಲ್ಲಿ ಹಿನ್ನಡೆ ಆಯಿತು. ಪಕ್ಷದ ಹಿರಿಯರನ್ನು ಬಿಟ್ಟು ಡಾ.ಸುಧಾಕರ್ ನೇತೃತ್ವದಲ್ಲಿ ಚುನಾವಣಾ ಪ್ರಣಾಳಿಕೆ ಮಾಡಿದರು. ಬಿಜೆಪಿಯ ಇಂತಹ ತಪ್ಪು ನಿರ್ಧಾರದಿಂದ ಸೋಲಾಗಿದೆ ಅಂತಾ ಬೇಸರ ವ್ಯಕ್ತಪಡಿಸಿದರು.
ವಿಧಾನಸಭೆ ಚುನಾವಣೆ ಸೋಲು ಹಿನ್ನೆಲೆಯಲ್ಲಿ ಎಂಪಿ ರೇಣುಕಾಚಾರ್ಯ ಕುಗ್ಗಿ ಹೋಗಿದ್ದರು. ಇದೀಗ ಮತ್ತೆ ರಾಜಕೀಯವಾಗಿ ಮೇಲೆ ಬರಲು ಕಸರತ್ತು ಆರಂಭಿಸಿದ್ದಾರೆ ಎನ್ನಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಂಬಂಧ ಇವತ್ತು ಮುಖಂಡರ ಸಭೆ ನಡೆಸಿದ್ದರು. ಈ ಸಭೆ ಬೆನ್ನಲ್ಲೇ, ಪಕ್ಷದೊಳಗಿನ ಒಳಬೇಗುದಿಯನ್ನು ಹೊರ ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ