ಬಹು ನಿರೀಕ್ಷಿತ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ
ಆರ್. ಅಶೋಕ್‌ಗೆ ವಿಪಕ್ಷ ನಾಯಕನ ಪಟ್ಟ ಕಟ್ಟುವ ಸಾಧ್ಯತೆ ಹೆಚ್ಚು
ಪದ್ಮನಾಭನಗರ ಬಿಜೆಪಿ ಶಾಸಕರಿಗೆ ದೇವೇಗೌಡ, ಕುಮಾರಸ್ವಾಮಿ ಬಲ
ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಬಿ.ವೈ ವಿಜಯೇಂದ್ರ ಅಧಿಕಾರ ಸ್ವೀಕರಿಸಿದ ಬಳಿಕ ಇಂದು ಬಹುನಿರೀಕ್ಷಿತ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪ್ರಮುಖವಾಗಿ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಆಗಲಿದೆ. ನ್ಯೂಸ್ ಫಸ್ಟ್ ಚಾನೆಲ್ ಮೂಲಗಳ ಪ್ರಕಾರ ಬಿಜೆಪಿ ಹೈಕಮಾಂಡ್ ಮಾಜಿ ಡಿಸಿಎಂ ಆರ್. ಅಶೋಕ್ ಅವರಿಗೆ ಮಣೆ ಹಾಕುವುದು ಬಹುತೇಕ ಪಕ್ಕಾ ಎನ್ನಲಾಗಿದೆ.
6 ತಿಂಗಳ ಬಳಿಕ ಕೊನೆಗೂ ರಾಜ್ಯ ಬಿಜೆಪಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ತಯಾರಿ ನಡೆಸಿದೆ. ಇಂದು ನಡೆಯುವ ಬಹು ನಿರೀಕ್ಷಿತ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆರ್. ಅಶೋಕ್ ಅವರಿಗೆ ವಿರೋಧ ಪಕ್ಷದ ನಾಯಕನ ಪಟ್ಟ ಕಟ್ಟೋದು ಖಚಿತ ಎನ್ನಲಾಗಿದೆ.
ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಆರ್.ಅಶೋಕ್ ಹಾಗೂ ಡಾ.ಸಿ.ಎನ್ ಅಶ್ವತ್ಥ ನಾರಾಯಣ ಅವರ ನಡುವೆ ಪೈಪೋಟಿ ಇತ್ತು. ಅಂತಿಮವಾಗಿ R.ಅಶೋಕ್‌ಗೆ ವಿಪಕ್ಷ ನಾಯಕನಾಗಿ ಆಯ್ಕೆ ಆಗುವ ನಿರೀಕ್ಷೆ ಇದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ವಿಪಕ್ಷ ನಾಯಕನ ಆಯ್ಕೆ ಬಗ್ಗೆ ನ್ಯೂಸ್‌ಫಸ್ಟ್‌ಗೆ ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಆರ್.ಅಶೋಕ್ ಆಯ್ಕೆಗೆ ಕಾರಣಗಳೇನು?
ಪದ್ಮನಾಭನಗರ ಶಾಸಕ ಆರ್.ಅಶೋಕ್ ರಾಜ್ಯ ಬಿಜೆಪಿಯಲ್ಲಿ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರು. ಮೈಸೂರು ಭಾಗದ ಒಕ್ಕಲಿಗ ಸಮುದಾಯಕ್ಕೆ ಸೇರಿರುವ ನಾಯಕ ಆರ್. ಅಶೋಕ್ ಅವರಾಗಿದ್ದಾರೆ. ಇದರ ಜೊತೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಜೊತೆಗೂ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆರ್.ಅಶೋಕ್ ಆಯ್ಕೆ ಮಾಡುವಂತೆ ಹೆಚ್‌ಡಿಡಿ ಹಾಗೂ ಹೆಚ್‌ಡಿಕೆ ಬಿಜೆಪಿ ಹೈಕಮಾಂಡ್ ನಾಯಕರ ಮುಂದೆ ಪ್ರಸ್ತಾಪ ಮಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಆರ್. ಅಶೋಕ್ ಅವರ ಆಯ್ಕೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪ್ಲಸ್ ಆಗುವ ಸಾಧ್ಯತೆ ಇದೆ.
ಮಾಜಿ ಡಿಸಿಎಂ ಆರ್.ಅಶೋಕ್ ಅವರಿಗೆ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿರುವ ಅನುಭವವಿದೆ. ಆರ್.ಅಶೋಕ್ ಮೂರುವರೆ ದಶಕಗಳಿಂದ ರಾಜಕೀಯ ಗುರುತಿಸಿಕೊಂಡಿದ್ದಾರೆ. ವಿಜಯೇಂದ್ರ ರಾಜ್ಯಾಧ್ಯಕ್ಷ, ಆರ್.ಅಶೋಕ್ ವಿಪಕ್ಷ ನಾಯಕರಾಗಿ ಮಾಡಿದ್ರೆ ರಾಜ್ಯ ಬಿಜೆಪಿ ಹಳೆಯ ಬೇರು, ಹೊಸ ಚಿಗುರು ಸೂತ್ರದಡಿಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕಟ್ಟಿ ಹಾಕಬಹುದು. ವಿಧಾನಸಭೆಯಲ್ಲಿ ಸರ್ಕಾರವನ್ನ ಎಲ್ಲಾ ವಿಚಾರಗಳಲ್ಲೂ ಕಟ್ಟಿ ಹಾಕಬಹುದು ಅನ್ನೋದು ಬಿಜೆಪಿ ಅಸಲಿ ಲೆಕ್ಕಾಚಾರ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ