newsfirstkannada.com

ಡಿ.ಕೆ ಶಿವಕುಮಾರ್ ಭೇಟಿಯಾದ ತೇಜಸ್ವಿನಿ ಅನಂತಕುಮಾರ್; ಬಿಜೆಪಿ ನಾಯಕರಿಗೆ ಹೊಸ ಟೆನ್ಷನ್?

Share :

Published September 4, 2023 at 2:48pm

    ಕುಮಾರಕೃಪ ಅತಿಥಿ ಗೃಹಕ್ಕೆ ಆಗಮಿಸಿದ ತೇಜಸ್ವಿನಿ ಅನಂತಕುಮಾರ್

    ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣು?

    45 ನಿಮಿಷ ಚರ್ಚೆ ಮಾಡಿ ತೆರಳಿದ ತೇಜಸ್ವಿನಿ ಅನಂತಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಕುಮಾರಕೃಪ ಅತಿಥಿ ಗೃಹಕ್ಕೆ ಆಗಮಿಸಿದ ತೇಜಸ್ವಿನಿ ಅನಂತಕುಮಾರ್ ಸುಮಾರು 45 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೇ ತೇಜಸ್ವಿನಿ ಅನಂತಕುಮಾರ್ ತೆರಳಿದ್ದಾರೆ.

ಇದನ್ನೂ ಓದಿ: ಸುದೀಪ್​​ ಬರ್ತ್​ಡೇ ಪಾರ್ಟಿಯಲ್ಲಿ ರಾಜಕೀಯ; ಬಿಜೆಪಿ ಈ ನಾಯಕರಿಗೆ ಗಾಳ ಹಾಕಿದ್ರಾ ಡಿಕೆಶಿ?

ಇತ್ತೀಚೆಗೆ ಬಿಜೆಪಿಯ ಹಾಲಿ, ಮಾಜಿ ಶಾಸಕರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗುತ್ತಿದ್ದಾರೆ. ಬಿಜೆಪಿ ನಾಯಕರ ಜೊತೆ ಡಿ.ಕೆ ಶಿವಕುಮಾರ್ ಸಂಪರ್ಕ ಸಾಧಿಸುತ್ತಿರೋದು ಆಪರೇಷನ್ ಹಸ್ತದ ರಾಜಕೀಯ ಗರಿಗೆದರುವಂತೆ ಮಾಡಿದೆ. ಲೋಕಸಭಾ ಚುನಾವಣೆಗೂ ಮುನ್ನ ಆಪರೇಷನ್ ರಾಜಕೀಯ ನಡೆಯೋ ಸಾಧ್ಯತೆಗಳಿದೆ. ಈ ಬೆಳವಣಿಗೆಯ ಮಧ್ಯೆ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿರೋದು ಕುತೂಹಲ ಕೆರಳಿಸಿದೆ.

ತೇಜಸ್ವಿನಿ ಅನಂತಕುಮಾರ್ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. 2019ರಲ್ಲಿ ಕೈ ತಪ್ಪಿದಂತೆ 2024ರ ಲೋಕಸಭಾ ಚುನಾವಣೆಯಲ್ಲೂ ತೇಜಸ್ವಿನಿಯವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಕೊಡುವುದು ಅನುಮಾನ ಎನ್ನಲಾಗ್ತಿದೆ. ಈ ಬೆಳವಣಿಗೆಯ ಮಧ್ಯೆ ತೇಜಸ್ವಿನಿ ಅನಂತಕುಮಾರ್ ಅವರು ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಜ್ಯ ರಾಜಕೀಯದ ಕುತೂಹಲದ ಮಧ್ಯೆ ಡಿ.ಕೆ ಶಿವಕುಮಾರ್ ಹಾಗೂ ತೇಜಸ್ವಿನಿ ಅನಂತಕುಮಾರ್ ಅವರು ಮಹತ್ವದ ಚರ್ಚೆ ನಡೆಸಿದ್ದಾರೆ. ದಿವಂಗತ‌ ಅನಂತಕುಮಾರ್ ಸ್ಮರಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಇದರ ಜೊತೆಗೆ ಅದಮ್ಯ ಚೇತನ ಸಂಸ್ಥೆಗೆ ಸಂಬಂಧಿಸಿದ ಬಾಕಿ ಬಿಲ್ ಬಿಡುಗಡೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಡಿ.ಕೆ ಶಿವಕುಮಾರ್ ಭೇಟಿಯಾದ ತೇಜಸ್ವಿನಿ ಅನಂತಕುಮಾರ್; ಬಿಜೆಪಿ ನಾಯಕರಿಗೆ ಹೊಸ ಟೆನ್ಷನ್?

https://newsfirstlive.com/wp-content/uploads/2023/09/Dk-Shivakumar-3.jpg

Load More