newsfirstkannada.com

ರಾಮನೂರಿಗೆ ಕರುನಾಡಿನ ಮೂರ್ತಿ.. ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್​ಗೆ ಶುಭಾಶಯಗಳ ಮಹಾಪೂರ

Share :

Published January 1, 2024 at 5:58pm

Update January 1, 2024 at 6:05pm

    ಹೆಚ್.ಡಿ.ಕೋಟೆ ತಾಲೂಕಿನ ಹಾರೋಹಳ್ಳಿ ಗ್ರಾಮದ ಕಲ್ಲಿನಿಂದ ಕೆತ್ತನೆ

    ಅಯೋಧ್ಯೆಯಲ್ಲಿ ಮೈಸೂರಿನ ಶಿಲ್ಪಿ ಕೆತ್ತಿದ್ದ ರಾಮನ ಮೂರ್ತಿ ಫೈನಲ್​

    ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ ರಾಮ ಲಲ್ಲಾ ಮೂರ್ತಿ

ಅಯೋಧ್ಯೆಯಲ್ಲಿ ಇದೇ ಜನವರಿ 22ರಂದು ಭವ್ಯ ರಾಮಮಂದಿರ ಲೋಕಾರ್ಪಣೆಯಾಗುತ್ತಿದೆ. ಐತಿಹಾಸಿಕ ರಾಮ ಮಂದಿರದಲ್ಲಿ ಕರ್ನಾಟಕದ ಶಿಲ್ಪಿ ಕೆತ್ತಿರೋ ರಾಮ ಲಲ್ಲಾ ಮೂರ್ತಿಯನ್ನೇ ಪ್ರತಿಷ್ಠಾಪನೆಯಾಗುತ್ತಿರೋದು ಹೆಮ್ಮೆಯ ವಿಚಾರ. ರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗೋಕೆ ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವ್ರು ಕೆತ್ತಿರೋ ಮೂರ್ತಿ ಆಯ್ಕೆಯಾಗಿದೆ.

ಇದನ್ನು ಓದಿ: BIG BREAKING: ಅಯೋಧ್ಯೆಗೆ ಮೈಸೂರಿನ ಶಿಲ್ಪಿ ಕೆತ್ತನೆಯ ರಾಮ ಲಲ್ಲಾ ಮೂರ್ತಿ ಆಯ್ಕೆ

51 ಇಂಚಿನ ರಾಮ ಲಲ್ಲಾ ಮೂರ್ತಿಯನ್ನ ಹೆಚ್.ಡಿ.ಕೋಟೆ ತಾಲೂಕಿನ ಹಾರೋಹಳ್ಳಿ ಗ್ರಾಮದ ಕಲ್ಲಿನಿಂದ ಅರುಣ್‌ ಯೋಗಿರಾಜ್ ಕೆತ್ತನೆ ಮಾಡಿದ್ದರು. ಇದೇ ಜನವರಿ 22ರಂದು ಈ ರಾಮ್​ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಾಗಲಿದ್ದು, ಅರುಣ್​ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ. ಈ ಸಂತಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯು ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಆಗುತ್ತಿರುವುದು ಅತ್ಯಂತ ಸಂತಸದ ವಿಚಾರ. ಜನವರಿ 22ರಂದು ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವ ವಿಷಯ ಅತ್ಯಂತ ಖುಷಿಯನ್ನು ತಂದಿದೆ. ಶ್ರೀರಾಮನಿಗೂ ಕರ್ನಾಟಕಕ್ಕೂ ವಿಶೇಷವಾದ ಬಾಂಧವ್ಯವಿದೆ. ಹನುಮಂತನು ಕರ್ನಾಟಕದಲ್ಲೇ ಜನಿಸಿದ್ದು, ಶ್ರೀರಾಮನಿಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಅವರು ತಿಳಿಸಿದ್ದಾರೆ. ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ನಡೆಯುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ವಿಷಯವಾಗಿದೆ. ಅರುಣ್ ಯೋಗಿರಾಜ್ ಅವರಿಗೆ ತುಂಬು ಹೃದಯದ ಅಭಿನಂದನೆಗಳು ಎಂದು ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಇನ್ನು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಕೂಡ ಟ್ವೀಟ್​ ಮಾಡುವ ಮೂಲಕ ಅರುಣ್ ಯೋಗಿರಾಜ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಕರ್ನಾಟಕದ ಹೆಮ್ಮೆಯ ಶಿಲ್ಪಿ ಮೈಸೂರಿನ ಶ್ರೀ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀರಾಮನ ಮೂರ್ತಿ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದ್ದು, ಶ್ರೀರಾಮನ ವಿಗ್ರಹ ಕೆತ್ತನೆಗೆ ಬಳಸಲಾದ ಕಲ್ಲು ಸಹ ನಮ್ಮ ಕರ್ನಾಟಕದ ಎಚ್.ಡಿ.ಕೋಟೆಯದ್ದು ಎಂಬುದು ಮತ್ತೊಂದು ವಿಶೇಷ. ರಾಮದೂತ ಹನುಮಂತನ ಜನ್ಮಸ್ಥಳ ಇರುವ ಪುಣ್ಯಭೂಮಿಯಾದ ಕರ್ನಾಟಕಕ್ಕೂ ಶ್ರೀರಾಮನಿಗೂ ಅವಿನಾಭಾವ ಸಂಭವವಿದೆ. ಶ್ರೀರಾಮನ ಮೂರ್ತಿ ಕೆತ್ತುವ ಐತಿಹಾಸಿಕ ಮತ್ತು ಪುಣ್ಯ ಕಾರ್ಯದಲ್ಲಿ ಭಾಗಿಯಾದ ಕರುನಾಡಿನ ಹೆಮ್ಮೆಯ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರಿಗೆ ಹೃದಯ ಪೂರ್ವಕ ಅಭನಂದನೆಗಳು ಎಂದು ಆರ್‌.ಅಶೋಕ್‌ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಮನೂರಿಗೆ ಕರುನಾಡಿನ ಮೂರ್ತಿ.. ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್​ಗೆ ಶುಭಾಶಯಗಳ ಮಹಾಪೂರ

https://newsfirstlive.com/wp-content/uploads/2024/01/rama.jpg

Load More